Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕುಕೊಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಜನರು ದೀಪವನ್ನು ಪಾತ್ರೆಯ ಕೆಳಗೆ ಮುಚ್ಚಿಡುವುದಿಲ್ಲ. ಜನರು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಮನೆಯಲ್ಲಿರುವವರಿಗೆಲ್ಲಾ ಬೆಳಕು ಪ್ರಕಾಶಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದೀಪವನ್ನು ಹಚ್ಚಿ ಯಾರೂ ಅಳೆಯುವ ಪಾತ್ರೆಯೊಳಗೆ ಇಡುವುದಿಲ್ಲ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕೊನ್ಬಿ ದಿವೊ ಪೆಟ್ವುನ್ ಭೊಗುನ್ಯಾಚ್ಯಾ ಬುಡಿ ಥೈನಾ; ಘರಾತ್ಲ್ಯಾ ಸಗ್ಳ್ಯಾಕ್ನಿ ಉಜ್ವೊಡ್ ದಿವ್ಕ್ ಮನುನ್ ದಿವೊ ಥವ್ತಲ್ಯಾ ಜಾಗ್ಯಾರ್ ವೈರ್ ಥವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:15
10 ತಿಳಿವುಗಳ ಹೋಲಿಕೆ  

ಇದಲ್ಲದೆ ಯೇಸು ಅವರಿಗೆ, “ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ?


“ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.


“ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.


“ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದನು.


ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹಚ್ಚಿರಬೇಕು.


“ಇಗೋ, ಏಳು ದೀಪಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;


ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೊಂದು ಭಾಗದಲ್ಲೂ ಕತ್ತಲಿಲ್ಲದ್ದಾಗಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು” ಅಂದನು.


ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.


ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.


ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು