Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಹೀಗಾದರೆ ಅವರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅದೇ ರೀತಿಯಲ್ಲಿ ನೀವು ಜನರಿಗೆ ಬೆಳಕಾಗಿರಬೇಕು. ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತಸೊಚ್ ತುಮ್ಚೊ ಉಜ್ವೊಡ್ಬಿ ಲೊಕಾಂಚ್ಯಾ ಇದ್ರಾಕ್ ಪೆಟುಂದಿ. ಅಶೆ ತುಮಿ ಕರ್‍ತಲಿ ಬರಿ ಕಾಮಾ ಬಗುನ್ ತೆನಿ ದೆವಾಕ್ ಸರ್ಗಾ ವೈಲ್ಯಾ ತುಮ್ಚ್ಯಾ ಬಾಬಾಕ್ ಹೊಗ್ಳುಂದಿತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:16
42 ತಿಳಿವುಗಳ ಹೋಲಿಕೆ  

ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಸತ್ಯವೂ ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ ಸುಬುದ್ಧಿಯೂ ಇರಬೇಕು;


ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.


ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.


ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು.


ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು.


ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.


ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.


ನೀವು ಮಾಡುವ ಈ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು ದೇವರನ್ನು ಕೊಂಡಾಡುವರು.


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ.


ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.


ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.


ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.


ಹಾಗೆಯೇ ಕೆಲವು ಸತ್ಕ್ರಿಯೆಗಳು ಪ್ರಸಿದ್ಧವಾಗಿವೆ, ಬೇರೆ ಕೆಲವು ಸತ್ಕ್ರಿಯೆಗಳು ಬೆಳಕಿಗೆ ಬಾರದ್ದಿದ್ದರೂ ಮರೆಯಾಗಿರಲಾರವು.


ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿದ್ದಲ್ಲಿ, ಅವರು ಮಕ್ಕಳನ್ನು ಸಾಕಿಕೊಂಡು, ಅತಿಥಿಸತ್ಕಾರವನ್ನು ಮಾಡುತ್ತಾ, ದೇವಜನರಿಗೆ ಉಪಚಾರಮಾಡಿದವಳಾಗಲಿ, ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡುತ್ತಾ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಿರಲಿ.


ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.


ನನ್ನ ಕುರಿತಾಗಿ ದೇವರನ್ನು ಕೊಂಡಾಡಿದರು.


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ, ಪ್ರೀತಿಯೂ, ಮನುಷ್ಯರಿಗೆ ಪ್ರತ್ಯಕ್ಷವಾದಾಗ,


ಅವನ ಹೃದಯದ ರಹಸ್ಯಗಳು ಬಯಲಾಗುವವು; ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬುದನ್ನು ಘೋಷಿಸುವನು.


ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ.


ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.


“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ


ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,


ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಇಸ್ರಾಯೇಲರು ನೋಡುತ್ತಿದ್ದರು. ಆದಕಾರಣ ಅವನು ಯೆಹೋವನ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ತನ್ನ ಮುಖದ ಮೇಲೆ ಆ ಮುಸುಕನ್ನು ಪುನಃ ಹಾಕಿಕೊಂಡಿರುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು