Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್‍ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:22
93 ತಿಳಿವುಗಳ ಹೋಲಿಕೆ  

ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.


ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ.


ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.


ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.


ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು.


ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.


ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.


ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ದೇಹದ ವಿಷಯದಲ್ಲಿ ಸೈತಾನನೊಂದಿಗೆ ವಾಗ್ವಾದ ಮಾಡಿದಾಗ, ಅವನು ಸೈತಾನನಿಗೆ ವಿರೋಧವಾಗಿ ಒಂದೂ ನಿಂದೆಯ ಮಾತನಾಡದೆ, “ಕರ್ತನು ನಿನ್ನನ್ನು ಗದರಿಸಲಿ” ಎಂದನು.


ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.


ಇದಲ್ಲದೆ ಎಪಿಕೂರಿಯನ್ನರು, ಸ್ತೋಯಿಕರು ಎಂಬ ತತ್ವವಿಚಾರಕರಲ್ಲಿ ಕೆಲವರು ಅವನ ಸಂಗಡ ಚರ್ಚೆಮಾಡಿದರು. ಅವರಲ್ಲಿ ಕೆಲವರು; “ಈ ವಾಚಾಳಿ ಏನು ಹೇಳ ಬೇಕೆಂದಿದ್ದಾನೆ?” ಅಂದರು. ಅವನು ಯೇಸುವಿನ ವಿಷಯವಾಗಿ ಮತ್ತು ಸತ್ತವರು ಎದ್ದು ಬರುವರೆಂಬುದರ ಕುರಿತು ಸಾರುತ್ತಿದ್ದುದರಿಂದ; “ಇವನು ಅನ್ಯದೇಶದ ದೇವರುಗಳನ್ನು ಪ್ರಚಾರಮಾಡುವವನಾಗಿ ಕಂಡುಬರುತ್ತಾನೆಂದು” ಬೇರೆ ಕೆಲವರು ಹೇಳಿದರು.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.


ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.


ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.


ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.


ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.


ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


“ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.


ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.


ಆದರೆ ನಾನು ನಿಮಗೆ ಹೇಳುವುದೇನಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆಪಡಿಸುವವರಿಗೊಸ್ಕರ ದೇವರನ್ನು ಪ್ರಾರ್ಥಿಸಿರಿ.


ಆದರೆ ನಾನು ನಿಮಗೆ ಹೇಳುವುದೇನಂದರೆ, ಆಣೆಯನ್ನೇ ಇಡಬೇಡಿರಿ. ಆಕಾಶದ ಮೇಲೆ ಆಣೆ ಇಡಬೇಡಿರಿ; ಅದು ದೇವರ ಸಿಂಹಾಸನವು.


ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.


ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.


ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.


ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ;


ಅವನ ಅಣ್ಣತಮ್ಮಂದಿರು, ತಮ್ಮ ತಂದೆಯು ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.


ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.


ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.


ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ?


ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ,


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.


ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.


ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ?


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.


ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.


ನಿನ್ನ ತಮ್ಮನ ದುರ್ದಿನದಲ್ಲಿ ಅವನ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಿರಬಾರದಾಗಿತ್ತು. ಯೆಹೂದ್ಯರ ನಾಶನದ ದಿನದಲ್ಲಿ ಹಿಗ್ಗಬಾರದಾಗಿತ್ತು. ಅವರ ಇಕ್ಕಟ್ಟಿನ ವೇಳೆಯಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು.


ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.


ನೆಬೂಕದ್ನೆಚ್ಚರನು ಉಗ್ರರೋಷವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು.


ನಿಷ್ಕಾರಣವಾಗಿ ನನ್ನ ವೈರಿಗಳು ಪಕ್ಷಿಯನ್ನೋ ಎಂಬಂತೆ ನನ್ನನ್ನು ಆತುರದಿಂದ ಹಿಂದಟ್ಟಿದರು.


ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು. ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು.


ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ, ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.


ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.


ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ; ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ. ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.


ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.


ಅವಶ್ಯವಿಲ್ಲದ ವಿರೋಧಿಗಳು ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಅವಕಾಶಕೊಡಬೇಡ; ನಿಷ್ಕಾರಣ ವೈರಿಗಳ ಕಣ್ಣುಸನ್ನೆಗೆ ಆಸ್ಪದಕೊಡಬೇಡ.


ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.


ದುರ್ಮತಿಗಳು ತಮ್ಮ ಮನಸ್ಸಿನಲ್ಲಿ, “ದೇವರೇ ಇಲ್ಲ” ಎಂದು ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯವಾದ ಅಕ್ರಮಗಳನ್ನು ನಡೆಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


“ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.


ಅವನು ಅವರನ್ನು ಶಪಿಸುತ್ತಾ, “ಹೋಗು ಕೊಲೆಗಾರನೆ, ನೀಚನೆ ಹೋಗು,


ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು.


ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.


ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.


ಅವನು ಯೆಹೂದ ದೇಶದ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.


ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,


ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,,


ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.


ಅವರು ಜನರನ್ನೂ, ಹಿರಿಯರನ್ನೂ, ಶಾಸ್ತ್ರಿಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು.


ಆಗ ಹಿರೀಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಇರುವುದನ್ನು ಕಂಡರು.


ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು.


ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.


ಇಲ್ಲವಾದ್ದರಿಂದ ನಾನು ಹಿರೀಸಭೆಯ ಎದುರಿನಲ್ಲಿ ನಿಂತಿದ್ದಾಗ, ನನ್ನಲ್ಲಿ ತಪ್ಪುಗಳೇನಾದರೂ ಕಂಡಿದ್ದರೆ ಇವರೇ ಹೇಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು