Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದರೆ ನಾನು ನಿಮಗೆ ಹೇಳುವದೇನಂದರೆ - ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಖರೆ ಮಿಯಾ ತುಮ್ಕಾ ಸಾಂಗ್ತಾ: ಕೊನ್ತರ್ ಎಕ್ಲ್ಯಾನ್ ಎಕ್ ಬಾಯ್ಕೊಮನ್ಸಿಕ್ ಬಗುನ್ ಬುರ್ಶಿ ಆಶಾ ಕರ್ಲ್ಯಾರ್, ತೆನಿ ಅಪ್ನಾಚ್ಯಾ ಮನಾತುಚ್ ತಿಚೆಕ್ಡೆ ವೆಭಿಚಾರ್ ಕರ್ಲ್ಯಾ ಸರ್ಕೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:28
20 ತಿಳಿವುಗಳ ಹೋಲಿಕೆ  

ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.


ನಿನ್ನ ಹೃದಯವು ಅವಳ ಸೌಂದರ್ಯವನ್ನು ಮೋಹಿಸದಿರಲಿ, ಅವಳು ತನ್ನ ಕಣ್ಣುರೆಪ್ಪೆಗಳಿಂದ ನಿನ್ನನ್ನು ವಶಮಾಡಿಕೊಂಡಾಳು, ನೋಡಿಕೋ.


“ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”


ಅವನು ಒಂದು ದಿನ ಸಂಜೆ ಹೊತ್ತಿನಲ್ಲಿ ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಅವನು ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


“ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,


ದೇಶಾಧಿಪತಿಯಾಗಿರುವ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ನೋಡಿ ತೆಗೆದುಕೊಂಡು ಹೋಗಿ ಮಾನಭಂಗಪಡಿಸಿದನು.


ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.


ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮೋಹಗೊಂಡು, ನಾನು ನೆರೆಯವನ ಬಾಗಿಲಲ್ಲಿ ಹೊಂಚು ಹಾಕಿದ್ದರೆ,


ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.


ಎಲ್ಲಾ ಸಂಪೂರ್ಣತೆಗೂ ಮೇರೆಯುಂಟೆಂದು ಬಲ್ಲೆನು, ಆದರೆ ನಿನ್ನ ಆಜ್ಞಾಶಾಸನವು ಅಪರಿಮಿತವಾದದ್ದು. ಮೆಮ್.


ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.


ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.


ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.


ಯಾವನಾದರೂ ಇನ್ನೊಬ್ಬನ ಹೆಂಡತಿಯೊಡನೆ ವ್ಯಭಿಚಾರಮಾಡಿದ್ದು ತಿಳಿದುಬಂದರೆ ಆ ಸ್ತ್ರೀ ಮತ್ತು ಪುರುಷರಿಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ಇಸ್ರಾಯೇಲರ ಮಧ್ಯದಿಂದ ತೆಗೆದುಹಾಕಬೇಕು.


ಇವಳು ಮೋಹಗೊಂಡು, ಕಸ್ದೀಯ ದೇಶಕ್ಕೆ ದೂತರನ್ನು ಕಳುಹಿಸಿದಳು.


ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು