Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಜನರು ನೋಡಲಿ ಎಂದು ನಿಮ್ಮ ಧರ್ಮಕಾರ್ಯಗಳನ್ನು ಅವರ ಮುಂದೆ ಮಾಡಬಾರದು, ನೋಡಿರಿ; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಎಚ್ಚರವಾಗಿರಿ! ನೀವು ಒಳ್ಳೆಯ ಕಾರ್ಯಗಳನ್ನು ಜನರ ಮುಂದೆ ಮಾಡಬೇಡಿ. ಜನರು ನೋಡಲೆಂದು ನೀವು ಅವುಗಳನ್ನು ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಜನರು ನೋಡಲಿ ಎಂದು ಅವರ ಮುಂದೆ, ನಿಮ್ಮ ದಾನಧರ್ಮಗಳನ್ನು ಮಾಡದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 “ತುಮ್ಚಿ ಬರಿ ಕಾಮಾ ಲೊಕಾಕ್ನಿ ದಿಸಿ ಸರ್ಕೆ ಕರುನಕಾಸಿ, ಅಶೆ ತುಮಿ ಕಾಯ್ ಕರುಕ್ ಲಾಗ್ಲ್ಯಾಶಿ ಮನುನ್ ಲೊಕಾಕ್ನಿ ಕಳ್ತಾ. ತುಮಿ ಅಶೆ ಕರ್ಲ್ಯಾರ್ ಸರ್ಗಾ ವೈಲ್ಯಾ ತುಮ್ಚ್ಯಾ ಬಾಬಾಕ್ನಾ ತುಮ್ಕಾ ಕಾಯ್ಬಿ ಭೊಮಾನ್ ಗಾವಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:1
36 ತಿಳಿವುಗಳ ಹೋಲಿಕೆ  

ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.


ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.


ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.


ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.


ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.


ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.


“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು.


ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.


ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.


ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.


ಆದುದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.


ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.


ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.


ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.


“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,


ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.


ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ಆದಕಾರಣ, ಅರಸನೇ, ಈ ನನ್ನ ಬುದ್ಧಿವಾದವು ನಿನಗೆ ಒಪ್ಪಿಗೆಯಾಗಲಿ, ನೀನು ಧರ್ಮವನ್ನು ಆಚರಿಸಿ ನಿನ್ನ ಪಾಪಗಳನ್ನು ನಾಶಗೊಳಿಸು, ಬಡವರಿಗೆ ಕರುಣೆಯನ್ನು ತೋರಿಸಿ ನಿನ್ನ ಅಪರಾಧಗಳನ್ನು ಧ್ವಂಸಮಾಡು; ಇದರಿಂದ ನಿನ್ನ ನೆಮ್ಮದಿಯ ಕಾಲವು ಹೆಚ್ಚಾದೀತು” ಎಂದು ಅರಿಕೆ ಮಾಡಿದನು.


ಐಗುಪ್ತದೇಶದ ಸರ್ವಐಶ್ವರ್ಯಕ್ಕಿಂತಲೂ, ಕ್ರಿಸ್ತನ ನಿಮಿತ್ತವಾಗಿ ಉಂಟಾಗುವ ನಿಂದೆಯೇ ಶ್ರೇಷ್ಠ ಭಾಗ್ಯವೆಂದೆಣಿಸಿಕೊಂಡನು. ಏಕೆಂದರೆ ಮುಂಬರುವ ಪ್ರತಿಫಲದ ಮೇಲೆ ಕಣ್ಣಿಟ್ಟಿದ್ದನು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.


ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.


“ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;


ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು