Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದದರಿಂದ ನೀನು ಧರ್ಮಕೊಡುವಾಗ ನಿನ್ನ ಮುಂದೆ ಕೊಂಬೂದಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀವು ಬಡಜನರಿಗೆ ಮಾಡುವ ದಾನವನ್ನು ಪ್ರಕಟಿಸಬೇಡಿ. ನೀವು ಕಪಟಿಗಳಂತೆ ಮಾಡಕೂಡದು. ತಾವು ಮಾಡುವ ದಾನವನ್ನು ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಗಳಲ್ಲಿ ತುತ್ತೂರಿ ಊದಿಸುತ್ತಾರೆ. ಜನರಿಂದ ಗೌರವ ಪಡೆಯಬೇಕೆಂಬುದೇ ಅವರ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಆದ್ದರಿಂದ ನೀನು ದಾನಧರ್ಮ ಮಾಡುವಾಗ, ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳ ಹಾಗೆ ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ತುತೂರಿಯನ್ನು ಊದಿಸಬೇಡ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 “ತೆಚೆಸಾಟ್ನಿ ಕನ್ನಾಬಿ ಎಕ್ ಗರ್ಜೆತ್ ಹೊತ್ತ್ಯಾ ಮಾನ್ಸಾಕ್ ತುಮಿ ಕಾಯ್ಬಿ ದಿತಾನಾ, ಕುಸ್ಡ್ಯಾ ಲೊಕಾನಿ ಲೊಕಾಕ್ನಿ ದಾಕ್ವುಕ್ ಮನುನ್ ಸಿನಾಗೊಗಾತ್ನಿ ಅನಿ ವನಿಯಾತ್ನಿ ಕರ್‍ಲ್ಯಾ ಸರ್ಕೆ ಕರುನಕಾಸಿ. ತೆನಿ ಅಶೆ ಕರಲ್ಲ್ಯಾ ತನ್ನಾ ತಿ ಮಾನ್ಸಾ ತೆಂಕಾ ಹೊಗಳ್ತ್ಯಾತ್. ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ತೆಂಚೆ ಭೊಮಾನ್ ತೆಂಕಾ ಗಾವುನ್ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:2
56 ತಿಳಿವುಗಳ ಹೋಲಿಕೆ  

“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


“ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ,


ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.


“ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.


ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.


ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.


ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.


ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.


ಆದರೆ ನೀವು ನಮ್ಮಲ್ಲಿರುವ ಬಡವರನ್ನು ಮರೆಯಬಾರದೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು, ಹಾಗೆ ಮಾಡುವುದರಲ್ಲಿ ನಾನೂ ಆಸಕ್ತನಾಗಿದ್ದೆನು.


ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.


“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.


ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.


“ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.


ಕೊರ್ನೆಲ್ಯನೇ ‘ನಿನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನೆ, ನಿನ್ನ ದಾನಧರ್ಮಗಳು ದೇವರ ಸನ್ನಿಧಾನದಲ್ಲಿ ನೆನಪಿಗೆ ಬಂದವು.


ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.


ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.


ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.


ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?


ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.


ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ.


ಸ್ನೇಹಿತರೆಂದು ಹೇಳಿಕೊಳ್ಳುವವರು ಬಹಳ ಜನರು, ನಂಬಿಗಸ್ತನಾದ ಸ್ನೇಹಿತನು ಎಲ್ಲಿ ಸಿಕ್ಕುವನು?


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.


ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ.


ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.


ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.


ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ?


ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.


“ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ.


ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.


“ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ.


ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: “‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.


ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.


ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು;


ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?


ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?


ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ,


ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.


ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸುವುದಿಲ್ಲ. ಅವರಲ್ಲಿನ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಪ್ರತಿಯೊಬ್ಬನೂ ಭ್ರಷ್ಟನೂ, ದುಷ್ಟನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದುದರಿಂದ ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇದೆ.


ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಬೇಡಿಕೊಂಡನು.


ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.


ನಾನು ಅವನನ್ನು ಭ್ರಷ್ಟಜನರ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆ ಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡುವೆನು.


ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.


ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು