Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಎಲೈ ಅಲ್ಪವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಬಯಲಿನಲ್ಲಿರುವ ಹುಲ್ಲಿಗೂ ದೇವರು ಹಾಗೆ ಹೊದಿಸುತ್ತಾನೆ. ಹುಲ್ಲಾದರೋ ಈ ಹೊತ್ತು ಇದ್ದು ನಾಳೆ ಬೆಂಕಿಯ ಪಾಲಾಗುತ್ತದೆ. ಆದ್ದರಿಂದ ದೇವರು ನಿಮಗೆ ಎಷ್ಟೋ ಹೆಚ್ಚಾಗಿ ತೊಡಿಸುತ್ತಾನೆಂದು ನಿಮಗೆ ಗೊತ್ತಿದೆ. ಅಲ್ಪವಿಶ್ವಾಸಿಗಳಾಗಿರಬೇಡಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೂ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅನಿ ಆಜ್ ರ್‍ಹವ್ನ್ ಉದ್ದ್ಯಾ ನಾಪತ್ತೊ ಹೊವ್ನ್ ಜಾತಲ್ಯಾ, ಆಗಿತ್ ಘಾಲುನ್ ಜಾಳ್ವುನ್ ಟಾಕ್ತಲ್ಯಾ ಹ್ಯಾ ಡಂಗಳ್ ಗವ್ತಾಕ್ ಜರ್‍ಕಡತ್ ದೆವ್ ಎವ್ಡೆ ಬರೆ ಕರುನ್ ನೆಸ್ವುತಾ ತರ್ ತುಮ್ಕಾ ತೊ ಕವ್ಡೆ ಬರೆ ಕರುನ್ ನೆಸ್ವಿನಾ? ಕವ್ಡೊ ಕಮಿ ವಿಶ್ವಾಸ್ ತುಮ್ಕಾ ಹಾಯ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:30
15 ತಿಳಿವುಗಳ ಹೋಲಿಕೆ  

ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನು.


ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.


ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.


ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?


ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.


ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.


ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು


ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.


ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ” ಅಂದನು.


ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.


ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.


ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು