ಮತ್ತಾಯ 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮತ್ತು ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದೀಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ನೀವು ಪ್ರಾರ್ಥಿಸುವಾಗ ಕಪಟಿಗಳ ಹಾಗೆ ಪ್ರಾರ್ಥಿಸಬೇಡಿ. ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಯ ಮೂಲೆಗಳಲ್ಲಿ ನಿಂತುಕೊಂಡು ಗಟ್ಟಿಯಾಗಿ ಪ್ರಾರ್ಥಿಸಲು ಇಷ್ಟಪಡುತ್ತಾರೆ. ತಾವು ಪ್ರಾರ್ಥಿಸುವುದನ್ನು ಜನರು ನೋಡಬೇಕೆಂಬುದೇ ಅವರ ಬಯಕೆ. ಅವರು ಆಗಲೇ ಅದರ ಪೂರ್ಣ ಪ್ರತಿಫಲವನ್ನು ಹೊಂದಿಕೊಂಡಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ನೀವು ಪ್ರಾರ್ಥನೆ ಮಾಡುವಾಗ, ಕಪಟಿಗಳಂತೆ ಮಾಡಬೇಡಿರಿ. ಅವರು ಜನರಿಗೆ ಕಾಣುವಂತೆ ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 “ತುಮಿ ಮಾಗ್ನಿ ಕರ್‍ತಾನಾ, ಕುಸ್ಡ್ಯಾ ಲೊಕಾಂಚ್ಯಾ ಸರ್ಕೆ ಕರುನಕಾಸಿ! ಸಗ್ಳ್ಯಾ ಲೊಕಾನಿ ಬಗಿ ಸರ್ಕೆ ಸಿನಾಗೊಗಾತ್ನಿ, ಅನಿ ವನಿಯಾತ್ನಿ ಇಬೆ ರ್‍ಹವ್ನ್ ಮಾಗ್ನಿ ಕರುಕ್ ತೆಂಕಾ ಲೈ ಕುಶಿ. ಮಿಯಾ ಖರೆಚ್ ಸಾಂಗ್ತಾ, ತೆಂಚೆ ಭೊಮಾನ್ ತೆಂಕಾ ಅದ್ದಿಚ್ ಗಾವುನ್ ಹೊಲಾ, ಅಧ್ಯಾಯವನ್ನು ನೋಡಿ |