Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹಾಗೆಯೇ ಒಳ್ಳೆಯಮರಗಳೆಲ್ಲಾ ಒಳ್ಳೆಯ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವುದು. ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದರಂತೆಯೇ ಒಳ್ಳೆಯ ಮರ ಒಳ್ಳೆಯ ಹಣ್ಣನ್ನೂ ಕೆಟ್ಟ ಮರವು ಕೆಟ್ಟ ಹಣ್ಣನ್ನೂ ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹಾಗೆಯೇ ಒಳ್ಳೇ ಮರಗಳೆಲ್ಲಾ ಒಳ್ಳೇ ಫಲವನ್ನು ಕೊಡುವವು; ಹುಳುಕು ಮರವು ಕೆಟ್ಟ ಫಲವನ್ನು ಕೊಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅದೇ ರೀತಿ ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದರಂತೆಯೇ, ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಆದರೆ ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಎಕ್ ಬರೆ ಝಾಡ್ ಬರಿಚ್ ಫಳಾ ದಿತಾ, ಎಕ್ ರೊಗೆಸಿ ಝಾಡ್ ಬರಿಲಿ ಫಳಾ ದಿ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:17
15 ತಿಳಿವುಗಳ ಹೋಲಿಕೆ  

ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.


ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.


ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,


ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.


ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ಹುಳುಕು ಮರವು ಒಳ್ಳೆಯ ಫಲವನ್ನು ಕೊಡಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು