Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದುಸ್ರ್ಯಾಕ್ನಿ ನ್ಯಾಯ್ ಕರುಕ್ ತುಮಿ ಖಲೊ ಮಾಪ್ ವಾಪರ್‍ತ್ಯಾಶಿ, ತೊಚ್ ಮಾಪ್ ದೆವ್ ತುಮ್ಚಿ ನ್ಯಾಯ್ ಕರ್‍ತಾನಾಬಿ ವಾಪರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:2
19 ತಿಳಿವುಗಳ ಹೋಲಿಕೆ  

ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.


ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.


ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.


ಯೆಹೋವನ ದಿನವು ಸಮಸ್ತ ಜನಾಂಗಗಳಿಗೆ ಸಮೀಪಿಸಿದೆ. ಎದೋಮೇ, ನೀನು ಮಾಡಿದ್ದೇ ನಿನಗಾಗುವುದು. ನಿನ್ನ ಕೃತ್ಯವೇ ನಿನ್ನ ತಲೆಗೆ ಬರುವುದು.


ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.


ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.


ಆಗ ಅದೋನೀಬೆಜೆಕನು, “ಕೈ ಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ” ಅಂದನು. ಅವರು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬರಲು ಅವನು ಅಲ್ಲಿ ಸತ್ತನು.


ಆದರೆ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ, ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಬಾಬಿಲೋನಿಗೆ ಮುಯ್ಯಿತೀರಿಸುವೆನು’” ಎಂದು ಯೆಹೋವನು ಅನ್ನುತ್ತಾನೆ.


ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.


ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ! ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ!


ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.


ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.


ಕಣ್ಣಿಗೆ ಕಣ್ಣನ್ನು, ಹಲ್ಲಿಗೆ ಹಲ್ಲನ್ನು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,


ಅವನು ಆಕೆಯ ಕಾಲುಗಳ ಬಳಿಯಲ್ಲಿ ಉರುಳಿ ಬಿದ್ದನು; ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. ಅವನು ಬಿದ್ದಲ್ಲೇ ಸತ್ತನು.


ಆಗ ಅವರು, “ನಮ್ಮನ್ನು ಇಸ್ರಾಯೇಲರ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ, ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು