16 ಅಂದು ಸಾಯಂಕಾಲ ಜನರು ದೆವ್ವದಿಂದ ಪೀಡಿತರಾಗಿದ್ದ ಅನೇಕರನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಯೇಸುವು ಮಾತಿನಿಂದಲೇ ದೆವ್ವಗಳನ್ನು ಅವರಿಂದ ಓಡಿಸಿದನು; ಕಾಯಿಲೆಯಾಗಿದ್ದ ಜನರೆಲ್ಲರನ್ನೂ ಗುಣಪಡಿಸಿದನು.
ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.
ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.
ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.
ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.