Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅದಕ್ಕೆ ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ, ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ಜೆಜುನ್ ತೆಕಾ, “ಕೊಲ್ಯಾಕ್ನಿ ಢುರೆ ಹಾತ್ ಮಳ್ಬಾ ವೈಲ್ಯಾ ಫಾಂಕ್ರಾಕ್ನಿ ಘಂಟೆ ಹಾತ್, ಖರೆ ಮಾನ್ಸಾಚೊ ಲೆಕ್ ಮನುನ್ ಬಲ್ವುತಲ್ಯಾ ಮಾಕಾ ಟಕ್ಲೆ ಟೆಕುಕ್ ಸೈತ್ ಜಾಗೊ ನಾ”. ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:20
35 ತಿಳಿವುಗಳ ಹೋಲಿಕೆ  

ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ!


ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ತ್ವರೆಯಾಗಿ ಹೋಗಿ ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು.


ಅದರ ಗುರುತೇನಂದರೆ, ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ” ಎಂದು ಹೇಳಿದನು.


ನಾನು ಬಡವನೂ, ದೀನನೂ ಆಗಿದ್ದೇನಲ್ಲಾ! ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ.


ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ, ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು.


ಹೆರೋದನ ಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಹೆಂಡತಿ ಯೋಹಾನಳು, ಸುಸನ್ನಳು, ಇನ್ನು ಬೇರೆ ಅನೇಕರು. ಇವರು ತಮ್ಮ ಸ್ವಂತ ಆಸ್ತಿಯಿಂದ ಅವರಿಗೆ ಉಪಚಾರಮಾಡುತ್ತಿದ್ದರು.


ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ.


ಪಕ್ಷಿಗಳು ಅವುಗಳಲ್ಲಿ ಗೂಡು ಕಟ್ಟಿಕೊಳ್ಳುತ್ತವೆ; ತುರಾಯಿ ಮರಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.


ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.


ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.


ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.


ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.


ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಕರ್ತನಾಗಿದ್ದಾನೆಂದು” ಹೇಳಿದನು.


ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


ಪಕ್ಷಿಗಳು ಅವುಗಳ ಬಳಿಯ ಮರಗಳ ಕೊಂಬೆಗಳಲ್ಲಿ ವಾಸವಾಗಿದ್ದು ಗಾನಮಾಡುತ್ತವೆ.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು.


ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.


ಆತನು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.


“ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.


ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು.


ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ” ಅಂದನು.


ಯೇಸು “ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ” ಎಂದು ಹೇಳಿದನು.


ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.


ಇದಲ್ಲದೆ ಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.


ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.


ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?


ಅದಕ್ಕೆ ಆ ಜನರು, “ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು.


ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.


“ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು