Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತನು ಅವರಿಗೆ - ಅಲ್ಪವಿಶ್ವಾಸಿಗಳೇ, ಯಾಕೆ ಧೈರ್ಯಗೆಡುತ್ತೀರಿ ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಎಲ್ಲಾ ಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೇಸು, “ನೀವು ಭಯಪಡುವುದೇಕೆ? ನಿಮ್ಮಲ್ಲಿ ಸಾಕಷ್ಟು ನಂಬಿಕೆಯಿಲ್ಲ” ಎಂದು ಉತ್ತರಿಸಿ ಎದ್ದುನಿಂತುಕೊಂಡು ಆ ದೊಡ್ಡ ಬಿರುಗಾಳಿಗೂ ಅಲೆಗಳಿಗೂ ಆಜ್ಞಾಪಿಸಿದನು. ಆ ಕೂಡಲೇ ಬಿರುಗಾಳಿ ನಿಂತುಹೋಯಿತು. ಸರೋವರ ಪ್ರಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ಜೆಜುನ್ ತೆಂಕಾ, “ತುಮಿ ಎವ್ಡೆ ಲೈ ಕಶ್ಯಾಕ್ ಭಿಂವ್ಲ್ಯಾಶಿ? ಕವ್ಡೊ ಕಮಿ ವಿಶ್ವಾಸ್ ತುಮ್ಚೊ!” ಮಟ್ಲ್ಯಾನ್. ತನ್ನಾ ತೊ ಉಟುನ್ ಇಬೆ ರ್‍ಹಾಲೊ ಅನಿ ವಾರ್ಯಾಕ್ ಅನಿ ಲ್ಹಾಟಾಕ್ನಿ ಗಪ್ ರ್‍ಹಾವಾ ಮನುನ್ ಸಾಂಗ್ಲ್ಯಾನ್, ತನ್ನಾ ಸಗ್ಳೆ ಎಗ್ದಮ್ ಶಾಂತ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:26
24 ತಿಳಿವುಗಳ ಹೋಲಿಕೆ  

ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.


ಸಮುದ್ರದ ಅಲ್ಲಕಲ್ಲೋಲಗಳನ್ನು ಅಧೀನದಲ್ಲಿ ಇಟ್ಟುಕೊಂಡಿರುವವನು ನೀನು; ತೆರೆಗಳು ಏಳುವಾಗ ಅವುಗಳನ್ನು ತಡೆಯುವವನು ನೀನು.


ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!


ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.


ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?


ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು,


ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳ ಮೇಲೆ ಸಿಟ್ಟುಗೊಂಡಿದ್ದಿಯಾ? ಸಮುದ್ರದ ಮೇಲೆ ಕೋಪವನ್ನು ಪ್ರದರ್ಶಿಸುತ್ತೀಯೋ? ಇಲ್ಲಾ, ನೀನು ಜಯರಥಗಳಲ್ಲಿ ಆಸೀನನಾಗಿ ಮೋಡಗಳ ಮೇಲೆ ರಕ್ಷಣೆಯನ್ನು ಕಳುಹಿಸಿದಾತನು!


ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.


ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?


ಆ ಜನರು ಬೆರಗಾಗಿ, “ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ” ಅಂದರು.


ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,


ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು