Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;” ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಯೇಸು ಅವನಿಗೆ - ಯಾರಿಗೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇವಿುಸಿದ ಕಾಣಿಕೆಯನ್ನು ಕೊಡು; ಅದು ಜನರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೇಸು ಅವನಿಗೆ, “ನೋಡು ಇದನ್ನು ನೀನು ಯಾರಿಗೂ ಹೇಳಬೇಡ, ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಜನರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಜೆಜುನ್ ತೆಕಾ, “ಹಿತ್ತೆ ಆಯ್ಕ್! ಹೆ ಕೊನಾಕ್ಬಿ ಸಾಂಗುನಕೊ, ನಿಟ್ಟ್ ಯಾಜಕಾಕ್ಡೆ ಜಾ, ಅನಿ ತೊ ತುಕಾ ತಪಾಸುನ್ ಬಗುಂದಿ. ಅನಿ ಮಾನಾ ತಿಯಾ ಗುನ್ ಹೊಲೆ ಮನುನ್ ಸಗ್ಳ್ಯಾಕ್ನಿ ಕಳುಸಾಟ್ನಿ ಮೊಯ್ಜೆನ್ ಸಾಂಗಲ್ಲಿ ದೆನ್ಗಿ ದಿ”. ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:4
31 ತಿಳಿವುಗಳ ಹೋಲಿಕೆ  

ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.


ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು.


ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು.


ನಂತರ ಯೇಸು ಅವರಿಗೆ, “ಇದು ಯಾರಿಗೂ ತಿಳಿಯದಂತೆ ನೋಡಿಕೊಳ್ಳಿರಿ” ಎಂದು ಕಟ್ಟುನಿಟ್ಟಾಗಿ ಆದೇಶಿಸಿದನು.


ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು.


ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.


ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.


ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.


“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ.


“ಮೋಶೆಯ ಧರ್ಮನಿಯಮವನ್ನಾಗಲಿ ಪ್ರವಾದಿಗಳ ಪ್ರವಾದನೆಗಳನ್ನಾಗಲಿ ನಿರರ್ಥಕಪಡಿಸುವುದಕ್ಕೆ ನಾನು ಬಂದೆನೆಂದು ನೆನಸಬೇಡಿರಿ; ನಿರರ್ಥಕಪಡಿಸಲು ಬಂದಿಲ್ಲ; ಬದಲಾಗಿ ನೆರವೇರಿಸುವುದಕ್ಕೆ ಬಂದಿದ್ದೇನೆ.


ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು.


ನಾನು ನನ್ನ ಮಹಿಮೆಯನ್ನು ಹುಡುಕುವುದಿಲ್ಲ, ಮಹಿಮೆಯನ್ನು ಹುಡುಕುವಾತನು ಒಬ್ಬನಿದ್ದಾನೆ, ಆತನೇ ನ್ಯಾಯಾಧಿಪತಿ.


ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.


“ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ,


ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು.


ಅದಕ್ಕೆ ಆತನು, “ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದನು.


ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.


ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.


“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,


ಆ ಬಟ್ಟೆ, ತೊಗಲು, ಹಾಸು, ಹೆಣಿಗೆ, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು.


ಆದರೆ ಆತನು ತಾನು ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು.


ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು.


ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.


ಆಕೆಯ ತಂದೆತಾಯಿಗಳು ಬೆರಗಾದರು. ಆತನು, ಈ ನಡೆದ ಸಂಗತಿಯನ್ನು ಯಾರಿಗೂ ತಿಳಿಸಬೇಡಿರೆಂದು ಅವರಿಗೆ ಆಜ್ಞಾಪಿಸಿದನು.


ಆಗ ಯೇಸುವು, ಇದನ್ನು ಯಾರಿಗೂ ಹೇಳಬೇಡಿರಿ ಎಂದು ಬಹು ಖಂಡಿತವಾಗಿ ಅವರಿಗೆ ಅಪ್ಪಣೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು