Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ತುಂಬಿಡುವುದಿಲ್ಲ. ತುಂಬಿಟ್ಟರೆ ಬುದ್ದಲಿಗಳು ಬಿರಿಯುತ್ತವೆ, ಮದ್ಯವು ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡುತ್ತಾರೆ. ಆಗ ಎರಡೂ ಉಳಿಯುತ್ತವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವದು, ಬುದ್ದಲಿಗಳು ಕೆಟ್ಟುಹೋಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಉಳಿಯುತ್ತವೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇದಲ್ಲದೆ ಜನರು ಹೊಸ ದ್ರಾಕ್ಷಾರಸವನ್ನು ಹಳೆ ದ್ರಾಕ್ಷಾರಸದ ಬುದ್ದಲಿಗಳಲ್ಲಿ ಹಾಕುವುದಿಲ್ಲ; ಏಕೆಂದರೆ ಹಳೆ ಬುದ್ದಲಿಗಳು ಒಡೆದುಹೋಗುತ್ತವೆ; ಮತ್ತು ದ್ರಾಕ್ಷಾರಸವು ಚೆಲ್ಲಿಹೋಗುತ್ತದೆ. ಆದ್ದರಿಂದ ಜನರು ಯಾವಾಗಲೂ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುವರು. ಆಗ ಎರಡೂ ಉಳಿಯುತ್ತವೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಂತೆಯೇ ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ಅವರು ಹಾಗೇನಾದರೂ ಮಾಡಿದರೆ ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ. ಆಗ ಅವೆರಡೂ ಉಳಿಯುತ್ತವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ನಾಹೊಲ್ಯಾರ್ ಕೊನ್‍ಬಿ ನ್ಹವೊ ವಾಯ್ನ್ ಜುನ್ನ್ಯಾ ಚಮ್ಡ್ಯಾಚ್ಯಾ ಪಿಸ್ವಿಯಾತ್ನಿ ವೊತಿನಾ. ತಸೆ ಕರ್ಲ್ಯಾರ್, ತಿ ಚಮ್ಡ್ಯಾಚಿ ಪಿಸ್ವಿ ಫುಟ್ತಾ, ಅನಿ ವಾಯ್ನ್ ಗಳುನ್ ಪಡುನ್ ಹಾಳ್ ಹೊತಾ. ಚಮ್ಡ್ಯಾಚ್ಯಾ ಪಿಸ್ವಿಯಾಬಿ ಹಾಳ್ ಹೊತ್ಯಾತ್. ನ್ಹವಿ ವಾಯ್ನ್ ನ್ಹವ್ಯಾ ಚಮ್ಡ್ಯಾಚ್ಯಾ ಪಿಸ್ವಿಯಾತ್ನಿ ಭರ್‍ತ್ಯಾತ್, ತನ್ನಾ ಪಿಸ್ವಿಬಿ ವಾಯ್ನ್ ಬಿ ಹಾಳ್ ಹೊಯ್‍ನಸ್ತಾನಾ ಬರೆಚ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:17
8 ತಿಳಿವುಗಳ ಹೋಲಿಕೆ  

ಹೊಗೆಯಲ್ಲಿ ನೇತು ಹಾಕಿರುವ ಬುದ್ದಲಿಯಂತಿದ್ದೇನೆ, ಆದರೂ ನಿನ್ನ ನಿಬಂಧನೆಗಳನ್ನು ಮರೆಯಲಿಲ್ಲ.


ಅವರು ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿ ತಟ್ಟುಗಳನ್ನು ಹಾಕಿ, ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು,


ಆಹಾ, ದ್ರಾಕ್ಷಾರಸವನ್ನು ತುಂಬಿ, ಬಾಯಿಕಟ್ಟಿದ ಹೊಸ ಬುದ್ದಲಿಗಳಂತೆ ನನ್ನ ಹೊಟ್ಟೆಯು ಒಡೆದುಹೋಗುವ ಹಾಗಿದೆ.


ಆ ತ್ಯಾಪೆಯು ಹಳೇ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.


ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.


ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು.


ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು.


ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು