Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಲ್ಲಿಗೆ ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿರುವ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ಅವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯುರೋಗಿಗೆ - ಮಗನೇ, ಧೈರ್ಯವಾಗಿರು, ನಿನ್ನ ಪಾಪಗಳು ಕ್ಷವಿುಸಲ್ಪಟ್ಟಿವೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಯೇಸುವಿನ ಬಳಿಗೆ ತಂದರು. ಅವನು ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಯೇಸು ಈ ಜನರಲ್ಲಿದ್ದ ದೊಡ್ಡ ನಂಬಿಕೆಯನ್ನು ಕಂಡು ಪಾರ್ಶ್ವವಾಯು ರೋಗಿಗೆ, “ಯುವಕನೇ, ಸಂತೋಷಪಡು. ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಉಲ್ಲ್ಯಾ ಮಾನ್ಸಾನಿ ಎಕ್ಲ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್ ಹಾತ್ರಾನಾ ಸಮೆತ್ ಜೆಜುಕ್ಡೆ ಘೆವ್ನ್ ಯೆಲ್ಯಾನಿ. ತೆಂಚೊ ವಿಶ್ವಾಸ್ ಬಗುನ್ ಜೆಜುನ್ ತ್ಯಾ ವಾರ್‍ಯಾನ್‍ಮಾರಲ್ಲ್ಯಾ ಮಾನ್ಸಾಕ್, “ಮಾಜ್ಯಾ ಪೊರಾ! ಧೈರೊ ಘೆ! ತುಜಿ ಸಗ್ಳೆ ಪಾಪ್ ಮಾಪ್ ಹೊಲೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:2
32 ತಿಳಿವುಗಳ ಹೋಲಿಕೆ  

ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು.


ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.


ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.


ಆಗ ಯೇಸು ಅವರನ್ನು, “ಮಕ್ಕಳಿರಾ, ನಿಮ್ಮಲ್ಲಿ ಮೀನುಗಳು ಉಂಟೋ?” ಎಂದು ಕೇಳಲು, ಅವರು ಆತನಿಗೆ “ಇಲ್ಲ” ಎಂದು ಉತ್ತರಕೊಟ್ಟರು.


ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.


ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;


ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ” ಎಂದು ಹೇಳಿದನು.


ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು.


ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.


ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.


ಆತನು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ” ಎಂದು ಹೇಳಿದನು.


ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.


ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು.


ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ’ ಎಂದು ಅನ್ನುವುದೋ?


ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.


ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, “ಧೈರ್ಯವಾಗಿರಿ, ನಾನೇ, ಹೆದರಬೇಡಿರಿ” ಎಂದು ಹೇಳಿದನು.


ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು.


ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು