Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸು ಆ ಅಧಿಕಾರಿಯ ಮನೆಯನ್ನು ತಲುಪಿದರು. ಅಲ್ಲಿ ವಾದ್ಯಗಾರರನ್ನೂ ಗದ್ದಲಮಾಡುತ್ತಿದ್ದ ಜನಜಂಗುಳಿಯನ್ನೂ ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಮೇಲೆ ಯೇಸು ಆ ಅಧಿಕಾರಿಯ ಮನೆಗೆ ಬಂದು ವಾದ್ಯಗಾರರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಳಿಕ ಯೇಸು ಅಧಿಕಾರಿಯೊಡನೆ ಮುಂದೆ ಸಾಗಿ ಅವನ ಮನೆಯೊಳಕ್ಕೆ ಹೋದನು. ಶವಸಂಸ್ಕಾರಕ್ಕಾಗಿ ಬಂದಿದ್ದ ವಾದ್ಯವೃಂದದವರಿಗೂ ಗೋಳಾಡುತ್ತಿದ್ದವರಿಗೂ ಯೇಸು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ತರುವಾಯ ಯೇಸು ಆ ಅಧಿಕಾರಿಯ ಮನೆಯೊಳಗೆ ಬಂದು ಕೊಳಲೂದುವವರನ್ನೂ ಜನರ ಗೊಂದಲವನ್ನೂ ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಮಾನಾ ಜೆಜು ಅದಿಕಾರ್‍ಯಾಚ್ಯಾ ಘರಾತ್ ಗೆಲೊ, ಅನಿ ಮರ್‍ನಾಚ್ಯಾ ಎಳಾರ್ ವಾಜ್ಪಾ ವಾಜ್ವುತಲೆ, ಅನಿ ಧಾಂದಲ್ ಕರ್‍ತಲ್ಯಾ ಲೊಕಾಕ್ನಿ ತೆನಿ ಬಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:23
12 ತಿಳಿವುಗಳ ಹೋಲಿಕೆ  

ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತವನ್ನು ರಚಿಸಿದನು. ಎಲ್ಲಾ ಗಾಯಕರೂ ಗಾಯಕಿಯರೂ ಅವನನ್ನು ಇಂದಿನ ವರೆಗೆ ತಮ್ಮ ಶೋಕಗೀತಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಾಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತಗ್ರಂಥದಲ್ಲಿ ಬರೆದಿರುತ್ತವೆ.


ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.


ಪೇಟೆಯಲ್ಲಿ ಕುಳಿತುಕೊಂಡು, ‘ನಾವು ನಿಮಗೋಸ್ಕರ ಕೊಳಲೂದಿದೆವು, ನೀವು ಕುಣಿಯಲಿಲ್ಲ; ಗೋಳಾಡಿದೆವು, ನೀವು ಅಳಲಿಲ್ಲ’ ಎಂದು ಒಬ್ಬರಿಗೊಬ್ಬರು ಕೂಗಿ ಹೇಳುವಂಥ ಮಕ್ಕಳನ್ನು ಹೋಲುತ್ತಾರೆ.


‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.


ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.


ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”


ಆದರೆ ಪೌಲನು ಇಳಿದು ಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು; “ಗೋಳಾಡಬೇಡಿರಿ, ಅವನು ಜೀವಂತವಾಗಿದ್ದಾನೆ” ಎಂದು ಹೇಳಿದನು.


ಬಾಬೆಲೇ ನಿನ್ನಲ್ಲಿ ವೀಣೆಗಾರರೂ, ವಾದ್ಯಗಾರರೂ, ಕೊಳಲು ಊದುವವರೂ, ತುತ್ತೂರಿಯವರೂ ಮೊದಲಾದವರ ಧ್ವನಿಯೂ ಇನ್ನೆಂದಿಗೂ ಕೇಳಿಸುವುದಿಲ್ಲ. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಇನ್ನೆಂದಿಗೂ ಕಾಣ ಸಿಕ್ಕುವುದಿಲ್ಲ. ಬೀಸುವ ಕಲ್ಲಿನ ಶಬ್ದವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು