ಮತ್ತಾಯ 9:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೇಸು ಎಲ್ಲಾ ಊರುಗಳನ್ನೂ ಹಳ್ಳಿಪಳ್ಳಿಗಳನ್ನೂ ಸುತ್ತಿಕೊಂಡು ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಯೇಸು ಊರುಗಳಲ್ಲೆಲ್ಲಾ ಮತ್ತು ಹಳ್ಳಿಗಳಲ್ಲೆಲ್ಲಾ ಸಂಚಾರ ಮಾಡಿದನು. ಯೇಸು ಅವರ ಸಭಾಮಂದಿರಗಳಲ್ಲಿ ಉಪದೇಶಿಸಿ ಪರಲೋಕರಾಜ್ಯದ ವಿಷಯವಾಗಿ ಶುಭವಾರ್ತೆಯನ್ನು ಹೇಳಿದನು. ಎಲ್ಲಾ ತರದ ರೋಗಗಳನ್ನು ಬೇನೆಗಳನ್ನು ವಾಸಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಜೆಜು ಸಗ್ಳ್ಯಾ ಶಾರಾತ್ನಿ ಅನಿ ಗಾಂವಾತ್ನಿ ಗೆಲೊ, ಸಿನಾಗೊಗಾತ್ನಿ ತೆನಿ ಶಿಕ್ವುಲ್ಯಾನ್ ಅನಿ ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗ್ಲ್ಯಾನ್, ಅನಿ ಸಗ್ಳ್ಯಾ ಸಿಕ್ ಲೊಕಾಕ್ನಿ, ಅನಿ ದುಕ್ನಿಲಾಗಲ್ಲ್ಯಾಕ್ನಿ ಅರಾಮ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |