Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆತನು ತನ್ನ ಶಿಷ್ಯರಿಗೆ, “ಬೆಳೆಯು ಬಹಳ ಇದೆ, ಆದರೆ ಕೆಲಸದವರು ಸ್ವಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆಗ ತನ್ನ ಶಿಷ್ಯರಿಗೆ - ಬೆಳೆಯು ಬಹಳ, ಕೆಲಸದವರು ಸ್ವಲ್ಪ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೇಸು ತನ್ನ ಶಿಷ್ಯರಿಗೆ, “ಬೆಳೆಯು ಬಹಳ, ಆದರೆ ಕೆಲಸಗಾರರು ಸ್ವಲ್ಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆಗ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಬಹಳವಾಗಿದೆ, ಕೆಲಸದವರೋ ಕೆಲವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತಸೆಮನುನ್, ತೆನಿ ಅಪ್ನಾಚ್ಯಾ ಶಿಸಾಕ್ನಿ, ಪಾಜೆ ತವ್ಡೆ ಪಿಕ್ಕ್ ಯೆಲಾ, ಖರೆ ಕಾಮ್ ಕರ್‍ತಲಿ ಲೊಕಾ ಲೈ ಕಮಿ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:37
17 ತಿಳಿವುಗಳ ಹೋಲಿಕೆ  

ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ.


ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.


ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.


ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.


ಕರ್ತನು ಆಜ್ಞಾಪಿಸಿದನು; ಶುಭವಾರ್ತೆಯನ್ನು ಪ್ರಸಿದ್ಧಪಡಿಸುವ ಸ್ತ್ರೀಸಮೂಹವು ಎಷ್ಟೋ ದೊಡ್ಡದು.


ಚೆನ್ನಾಗಿ ಅಧಿಕಾರ ನಡಿಸುವ ಸಭೆಯ ಹಿರಿಯರನ್ನು, ಅವರೊಳಗೆ ವಿಶೇಷವಾಗಿ ದೇವರ ವಾಕ್ಯವನ್ನು ಸಾರುವುದರಲ್ಲಿಯೂ ಉಪದೇಶಿಸುವುದರಲ್ಲಿಯೂ ಕಷ್ಟಪಡುವವರನ್ನು ಎರಡುಪಟ್ಟು ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.


ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು.


ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನಗೆ ಕೇಡು ಮಾಡುವುದಿಲ್ಲ; ಈ ಪಟ್ಟಣದಲ್ಲಿ ನನಗೆ ಬಹಳ ಮಂದಿ ಇದ್ದಾರೆ” ಎಂದು ಹೇಳಿದನು.


ಆದುದರಿಂದ ಬೆಳೆಯ ಯಜಮಾನನನ್ನು, ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಿಕೊಡಬೇಕೆಂದು ಬೇಡಿಕೊಳ್ಳಿರಿ” ಎಂದು ಹೇಳಿದನು.


“ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.


ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು