Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವೋ, “ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವಾದರೋ, ‘ಸರ್ವೇಶ್ವರಸ್ವಾಮಿಯ ಪೀಠ ಅಶುದ್ಧ; ಅದರ ಮೇಲಿನ ಆಹಾರಪದಾರ್ಥಗಳು ಅಸಹ್ಯ’ ಎಂದು ಹೇಳಿ ನನ್ನ ನಾಮಕ್ಕೆ ಅಪಕೀರ್ತಿ ತರುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವೋ - ಯೆಹೋವನ ಮೇಜು ಅಶುದ್ಧ, ಅದರ ಮೇಲಣ ಎಡೆಯು ತುಚ್ಫ ಅಂದುಕೊಳ್ಳುವದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಆದರೆ ನೀವು ನನ್ನ ನಾಮವನ್ನು ಘನಪಡಿಸುವದಿಲ್ಲ. ನನ್ನ ಮೇಜು ಅಶುದ್ಧವಾದದ್ದೆಂದು ನೀವು ಹೇಳುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಆದರೆ ನೀವು ಯೆಹೋವ ದೇವರ ಮೇಜು ಅಶುದ್ಧ, ‘ಅದರ ಫಲವೂ, ಅದರ ಆಹಾರವೂ ಅಸಹ್ಯ,’ ಎಂದು ಹೇಳಿ ಅದನ್ನು ಅಪವಿತ್ರ ಮಾಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:12
13 ತಿಳಿವುಗಳ ಹೋಲಿಕೆ  

“ನಿಮ್ಮ ದೆಸೆಯಿಂದ ಅನ್ಯಜನರ ಮಧ್ಯದಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆಂದು” ಬರೆದಿದೆಯಲ್ಲಾ.


“ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.


ಬಡವರ ತಲೆಗಳನ್ನು ನೆಲದ ಧೂಳಿನಂತೆ ತುಳಿದು ಬಿಡುತ್ತಾರೆ, ದೀನರ ದಾರಿಗೆ ಅಡ್ಡ ಹಾಕುತ್ತಾರೆ. ಮಗನೂ ಮತ್ತು ತಂದೆಯೂ ಒಬ್ಬಳಲ್ಲಿ ಹೋಗಿ ನನ್ನ ಪವಿತ್ರ ನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ.


ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು.


“‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.


ಅಲ್ಲಿ ಮರದ ವೇದಿಕೆಯೊಂದಿತ್ತು. ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳವಾಗಿತ್ತು. ಅದರ ಮೂಲೆಗಳೂ, ಪೀಠವೂ, ಪಕ್ಕಗಳೂ ಮರದ್ದೇ ಆಗಿದ್ದವು. ಆ ಪುರುಷನು ನನಗೆ, “ಇದು ಯೆಹೋವನ ಸಮ್ಮುಖದ ಮೇಜು” ಎಂದು ಹೇಳಿದನು.


ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ, ನನ್ನ ಸೇವೆ ಮಾಡುವುದಕ್ಕೆ ನನ್ನ ಯಜ್ಞವೇದಿಯನ್ನು ಸಮೀಪಿಸಿ, ನನ್ನ ಆಲಯದ ಪಾರುಪತ್ಯವನ್ನು ವಹಿಸುವರು.


ಇಸ್ರಾಯೇಲೇ, ನಾನು ನಿನ್ನನ್ನು ನಾಶಮಾಡುವೆನು, ಯಾರು ನಿನ್ನನ್ನು ರಕ್ಷಿಸುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು