ಮಲಾಕಿ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿ ಗಂಡುಪಶುವಿದ್ದರೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಗಲಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಈಡಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಆದರೆ ತನ್ನ ಮಂದೆಯಲ್ಲಿ ದೋಷವಿಲ್ಲದ ಗಂಡು ಪಶು ಇರಲಾಗಿ ಅದನ್ನು ಅರ್ಪಿಸಲು ಪ್ರಮಾಣಮಾಡಿ, ಯೆಹೋವ ದೇವರಿಗೆ ದೋಷವುಳ್ಳದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ, ಏಕೆಂದರೆ ನಾನು ಮಹಾ ಅರಸನು, ನನ್ನ ಹೆಸರು ಇತರ ಜನಾಂಗಗಳಲ್ಲಿ ಭಯಭಕ್ತಿಯುಳ್ಳದ್ದಾಗಿರಬೇಕು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |