Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲು ಎದೋಮ್ಯರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಏಸಾವನ ವಂಶದವರಾದ ಎದೋಮ್ಯರು, “ನಮ್ಮ ನಾಡು ಹಾಳಾಯಿತು; ಆದರೆ ಹಾಳುಬಿದ್ದದ್ದನ್ನು ಮರಳಿ ಕಟ್ಟುವೆವು,” ಎನ್ನಬಹುದು. ಅದಕ್ಕೆ ಸೇನಾಧೀಶ್ವರ ಸರ್ವೇಶ್ವರ ಕೊಡುವ ಉತ್ತರ ಇದು: “ಅವರು ಕಟ್ಟಲಿ; ನಾನು ಅವುಗಳನ್ನು ಕೆಡವಿಹಾಕುವೆ. ‘ಅವರು ಕೇಡಿಗರು. ಸರ್ವೇಶ್ವರಸ್ವಾಮಿಯ ಕೋಪಕ್ಕೆ ಗುರಿಯಾದವರು’ ಎಂದು ಜನರೇ ಆಡಿಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರಲು ಎದೋಮ್ಯರು - ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು ಅಂದುಕೊಂಡರೆ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅವರು ಕಟ್ಟಿದರೂ ನಾನು ಕೆಡವಿ ಹಾಕುವೆನು; ಅವರು ದುಷ್ಟ ಪ್ರಾಂತದವರೂ, ಯೆಹೋವನ ನಿತ್ಯಕೋಪಕ್ಕೆ ಈಡಾದ ಜನರೂ ಅನ್ನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎದೋಮ್ಯರು ಒಂದುವೇಳೆ ಹೀಗೆ ಹೇಳಿಯಾರು: “ನಾವು ನಾಶವಾಗಿದ್ದೇವೆ. ಹೌದು, ಆದರೆ ನಾವು ಹಿಂದೆ ಹೋಗಿ ತಿರುಗಿ ನಮ್ಮ ಪಟ್ಟಣಗಳನ್ನು ಕಟ್ಟುವೆವು.” ಸರ್ವಶಕ್ತನಾದ ಯೆಹೋವನು, “ಅವರು ಪಟ್ಟಣಗಳನ್ನು ತಿರುಗಿ ಕಟ್ಟಿದರೆ ನಾನು ತಿರುಗಿ ನಾಶಮಾಡುವೆನು” ಎಂದು ಹೇಳುತ್ತಾನೆ. ಇದಕ್ಕಾಗಿಯೇ ಜನರು, “ಎದೋಮ್ ದುಷ್ಟ ಪ್ರಾಂತ್ಯವಾಗಿದೆ, ಯೆಹೋವನು ನಿರಂತರವಾಗಿ ಅದನ್ನು ದ್ವೇಷಿಸುತ್ತಾನೆ” ಎಂದು ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಎದೋಮ್ಯರು, “ನಾವು ಬಡಕಲಾದೆವು, ಆದರೆ ನಾವು ಮತ್ತೆ ಹಾಳಾದ ಸ್ಥಳಗಳನ್ನು ಕಟ್ಟುವೆವು,” ಎಂದು ಹೇಳಬಹುದು. ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು. ಜನರು ಅವರನ್ನು ದುಷ್ಟತನದ ನಾಡೆಂದೂ, ಯೆಹೋವ ದೇವರು ಎಂದೆಂದಿಗೂ ಸಿಟ್ಟು ಮಾಡುವ ಜನವೆಂದೂ ಕರೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:4
37 ತಿಳಿವುಗಳ ಹೋಲಿಕೆ  

ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ.


ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವವು; ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ.”


ಯೆಹೋವನು ಇಂತೆನ್ನುತ್ತಾನೆ, “ನಿನಗೆ ಮುಂದೆ ಒಳ್ಳೆಯ ಗತಿಯಾಗುವುದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು.


ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.


ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು.


ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.


“ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.


ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?”


ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಾಯೇಲಿನ ಮೇರೆಯಲ್ಲಿ ನಿಮಗೆ ದಂಡನೆಯನ್ನು ವಿಧಿಸುವೆನು, ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ಕೈದಿಗಳ ಕಾಲ ಕೆಳಗೆ ಮುದುರಿಕೊಂಡು, ಹತರಾದವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ ಇಷ್ಟೆಲ್ಲಾ ನಡೆದರೂ ಯೆಹೋವನ ಕೋಪವು ತೀರದೆ ಕೈ ಇನ್ನು ಚಾಚಿಯೇ ಇರುವುದು.


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.


ಯೆಹೋವನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ; ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.


ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.


ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ನನ್ನ ಸಂಗಡ ಇರದವನು ನನಗೆ ವಿರೋಧಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದುರಿಸುವವನಾಗಿದ್ದಾನೆ.


ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ದೆದಾನಿನವರೇ, ಹಿಂದಿರುಗಿರಿ, ಓಡಿಹೋಗಿರಿ; ಒಳಪ್ರಾಂತ್ಯದಲ್ಲಿ ವಾಸಿಸಿರಿ; ಏಕೆಂದರೆ ನಾನು ಎದೋಮನ್ನು ದಂಡಿಸುವ ಕಾಲದಲ್ಲಿ ಏಸಾವನಿಗೆ ವಿಧಿಸಿದ ಆಪತ್ತನ್ನು ಅದರ ಮೇಲೆ ಬರಮಾಡುವೆನು.


ಹೀಗಿರಲು ಯೆಹೋವನು ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಮೃಗಗಳು ಖಂಡಿತವಾಗಿ ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಮತ್ತು ಪಶುಗಳನ್ನೂ ನಿರ್ಮೂಲಮಾಡಿ, ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ನಾನು ನಿನ್ನನ್ನು ಬೋಳು ಬಂಡೆಯನ್ನಾಗಿ ಮಾಡುವೆನು; ನೀನು ಬಲೆಗಳನ್ನು ಹಾಕುವ ಸ್ಥಳವಾಗುವಿ; ನಿನ್ನ ಮೇಲೆ ಇನ್ನು ಕಟ್ಟಡವನ್ನು ಕಟ್ಟುವುದಿಲ್ಲ; ಯೆಹೋವನಾದ ನಾನೇ ಅಪ್ಪಣೆ ಕೊಟ್ಟಿದ್ದೇನೆ” ಇದು ಕರ್ತನಾದ ಯೆಹೋವನ ನುಡಿ.


ನಾನು ನಿನ್ನ ಪಟ್ಟಣಗಳನ್ನು ನಾಶಪಡಿಸಲು ನೀನು ಹಾಳಾಗುವಿ; ಆಗ ನಾನೇ ಯೆಹೋವನು ಎಂದು ತಿಳಿದುಕೊಳ್ಳುವಿ.


ನಾನು ಚಳಿಗಾಲದ ಅರಮನೆಯನ್ನೂ, ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು. ದಂತಮಂದಿರಗಳು ಹಾಳಾಗುವವು ಮತ್ತು ದೊಡ್ಡಮನೆಗಳು ಕೊನೆಗಾಣುವವು” ಇದು ಯೆಹೋವನ ನುಡಿ.


ನೀವು ಬಡವರನ್ನು ತುಳಿದು, ಅವರಿಂದ ಗೋದಿಯನ್ನು ಬಿಟ್ಟಿ ತೆಗೆದುಕೊಂಡ ಕಾರಣ ಕೆತ್ತಿದ ಕಲ್ಲಿನಿಂದ ನೀವು ಕಟ್ಟಿಕೊಂಡ ಮನೆಗಳಲ್ಲಿ, ವಾಸಿಸದೆ ಇರುವಿರಿ. ಒಳ್ಳೆಯ ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು, ಅದರ ದ್ರಾಕ್ಷಾರಸವನ್ನು ಕುಡಿಯುವಿರಿ.


ಇಗೋ, ನೋಡಿರಿ, ಯೆಹೋವನು ಆಜ್ಞಾಪಿಸಲು, ದೊಡ್ಡ ಮನೆಯು ಕೆಡವಲ್ಪಟ್ಟು ಚೂರುಚೂರಾಯಿತು, ಚಿಕ್ಕ ಮನೆಯೂ ಮುರಿದುಹೋಗುವುದು.


ಓಬದ್ಯನಿಗಾದ ದೈವದರ್ಶನ. ಕರ್ತನಾದ ಯೆಹೋವನು ಎದೋಮನ್ನು ಕುರಿತು ಹೀಗೆ ನುಡಿಯುತ್ತಾನೆ: ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇವೆ. ಆತನು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ, “ಹೊರಡಿರಿ! ಯುದ್ಧಕ್ಕೆ ಹೊರಟು ಎದೋಮಿನ ಮೇಲೆ ಬೀಳೋಣ”


ನೀನು ನಿನ್ನ ತಮ್ಮನಾದ ಯಾಕೋಬನಿಗೆ ಮಾಡಿದ ಹಿಂಸೆಯ ನಿಮಿತ್ತ ಅವಮಾನವು ನಿನ್ನನ್ನು ಕವಿಯುವುದು. ನಿತ್ಯನಾಶನಕ್ಕೆ ಗುರಿಯಾಗುವಿ.


ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.


ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?


ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು