Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವೇ ಇದನ್ನು ಕಣ್ಣಾರೆ ಕಂಡು ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ, ‘ಮಹಾ ಮಹಿಮೆಯುಳ್ಳವನು’” ಅಂದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇಸ್ರಯೇಲಿನ ಜನರಾದ ನೀವು ಇದನ್ನು ಕಣ್ಣಾರೆ ಕಂಡು, “ಸರ್ವೇಶ್ವರ ಇಸ್ರಯೇಲಿನ ಹೊರಗೂ ಮಹಾಮಹಿಮೆಯುಳ್ಳವರು!” ಎಂದು ಹೇಳಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀವೇ ಇದನ್ನು ಕಣ್ಣಾರೆ ಕಂಡು - ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ ಮಹಾಮಹಿಮೆಯುಳ್ಳವನು ಅಂದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದನ್ನು ನೋಡಿದವರಾದ ನೀವು ಹೇಳುತ್ತೀರಿ, “ಯೆಹೋವನು ಮಹಾದೇವರು. ಇಸ್ರೇಲಿನ ಹೊರಗೂ ತನ್ನ ಪ್ರತಾಪವನ್ನು ತೋರಿಸುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿಮ್ಮ ಕಣ್ಣುಗಳಿಂದ ನೋಡಿ, ‘ಇಸ್ರಾಯೇಲಿನ ಮೇರೆ ಆಚೆಗೂ ಯೆಹೋವ ದೇವರು ಮಹೋನ್ನತರು!’ ಎಂದು ನೀವು ಹೇಳುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:5
14 ತಿಳಿವುಗಳ ಹೋಲಿಕೆ  

ಯೆಹೋವನು ನಡಿಸಿದ ಆ ವಿಶೇಷ ಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಿದ್ದೇನೆ.


ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”


ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.


ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.


ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”


ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ, ಐಗುಪ್ತರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನು ಉಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವು ಸಾಕ್ಷಿಗಳಾಗಿದ್ದಿರಿ.


ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ.


“ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು ಶತ್ರುವಿನ ಆಯುಧಗಳಿಗೆ ಬೆಂಕಿಯಿಟ್ಟು ಸುಟ್ಟುಬಿಡುವರು. ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು