Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 1:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. “ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?” ಅನ್ನುತ್ತೀರಿ. “ಯೆಹೋವನ ಮೇಜಿಗೆ ಘನತೆಯೇನಿದೆ?” ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ನನ್ನ ಬಲಿಪೀಠದ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸಿ ನನ್ನನ್ನು ಅವಮಾನಗೊಳಿಸಿದ್ದೀರಿ;” “ಯಾವ ವಿಷಯದಲ್ಲಿ ನಿಮಗೆ ಅಗೌರವ ತಂದಿದ್ದೇವೆ ಎನ್ನುತ್ತೀರೋ? ‘ಸರ್ವೇಶ್ವರಸ್ವಾಮಿಯ ವೇದಿಕೆಗೆ ಘನತೆ ಏನಿದೆ?’ ಎಂದು ಹೇಳಿಕೊಳ್ಳುವುದರಲ್ಲಿದೆ ಆ ಅಗೌರವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. ಯಾವ ವಿಷಯದಲ್ಲಿ ನಿನ್ನನ್ನು ಅಶುದ್ಧಗೊಳಿಸಿದ್ದೇವೆ ಅನ್ನುತ್ತೀರೋ?ಯೆಹೋವನ ಮೇಜಿಗೆ ಘನತೆಯೇನಿದೆ ಎಂದು ನೀವು ಅಂದುಕೊಳ್ಳುವದರಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನನ್ನ ಯಜ್ಞವೇದಿಕೆಗೆ ನೀವು ಅಶುದ್ಧ ರೊಟ್ಟಿಗಳನ್ನು ಅರ್ಪಿಸುತ್ತೀರಿ” ಎಂದು ಯೆಹೋವನು ಹೇಳುತ್ತಾನೆ. “ಯಾವ ವಿಷಯದಲ್ಲಿ ಅದು ಅಶುದ್ಧವಾಯಿತು?” ಎಂದು ನೀವು ಕೇಳುತ್ತೀರಿ. ಅದಕ್ಕೆ ಯೆಹೋವನು, “ನನ್ನ ಯಜ್ಞವೇದಿಕೆಯನ್ನು ನೀವು ಗೌರವಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸುತ್ತೀರಿ. “ ‘ಯಾವುದರಲ್ಲಿ ನಿಮ್ಮನ್ನು ನಾವು ಅಪವಿತ್ರ ಮಾಡಿದ್ದೇವೆ?’ ಎಂದು ಕೇಳುತ್ತೀರಿ.” ಯೆಹೋವ ದೇವರ ಮೇಜು ಹೀನವಾದದ್ದೆಂದು ನೀವು ಹೇಳುವುದರಿಂದಲೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 1:7
14 ತಿಳಿವುಗಳ ಹೋಲಿಕೆ  

ನೀವೋ, “ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.


ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.


ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನೂ ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೇರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,


ಅಲ್ಲಿ ಮರದ ವೇದಿಕೆಯೊಂದಿತ್ತು. ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳವಾಗಿತ್ತು. ಅದರ ಮೂಲೆಗಳೂ, ಪೀಠವೂ, ಪಕ್ಕಗಳೂ ಮರದ್ದೇ ಆಗಿದ್ದವು. ಆ ಪುರುಷನು ನನಗೆ, “ಇದು ಯೆಹೋವನ ಸಮ್ಮುಖದ ಮೇಜು” ಎಂದು ಹೇಳಿದನು.


ಅದು ಕುಂಟಾಗಿ, ಕುರುಡಾಗಿ ಇಲ್ಲವೆ ಬೇರೆ ವಿಧದಿಂದ ವಿರೂಪವಾಗಿದ್ದರೆ ಅದನ್ನು ನಿಮ್ಮ ದೇವರಾದ ಯೆಹೋವನಿಗೆ ಸಮರ್ಪಿಸಬಾರದು.


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.


“‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.


ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.


ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.


ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ, ನನ್ನ ಸೇವೆ ಮಾಡುವುದಕ್ಕೆ ನನ್ನ ಯಜ್ಞವೇದಿಯನ್ನು ಸಮೀಪಿಸಿ, ನನ್ನ ಆಲಯದ ಪಾರುಪತ್ಯವನ್ನು ವಹಿಸುವರು.


ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು