ಮಲಾಕಿ 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಮ್ಮೆಲ್ಲರಿಗೂ ಒಬ್ಬನೇ ತಂದೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಮಾಡಿದ್ದನಲ್ಲವೇ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪೂರ್ವಿಕರೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಹೊಲೆಮಾಡುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಮ್ಮೆಲ್ಲರಿಗೂ ತಂದೆ ಒಬ್ಬರೇ ಅಲ್ಲವೇ? ನಮ್ಮೆಲ್ಲರನ್ನು ಸೃಷ್ಟಿಸಿದ ದೇವರು ಒಬ್ಬರೇ ಅಲ್ಲವೇ? ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹ ಮಾಡುವುದೇಕೆ? ದೇವರು ನಮ್ಮ ಪೂರ್ವಜರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನಾವು ಉಲ್ಲಂಘಿಸುವುದೇಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಮ್ಮೆಲ್ಲರಿಗೂ ಒಬ್ಬನೇ ತಂದೆಯಷ್ಟೆ; ಒಬ್ಬನೇ ದೇವರು ನಮ್ಮನ್ನು ಸೃಷ್ಟಿಸಿದನಲ್ಲಾ; ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹಮಾಡಿ ದೇವರು ನಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸುವದೇಕೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಮಗೆಲ್ಲರಿಗೂ ಒಬ್ಬನೇ ತಂದೆಯಾದ ದೇವರು. ಆ ದೇವರೇ ನಮ್ಮೆಲ್ಲರನ್ನು ಉಂಟುಮಾಡಿದನು. ಹೀಗಿರುವಾಗ ಜನರು ತಮ್ಮ ಸಹೋದರರನ್ನು ಯಾಕೆ ಮೋಸಪಡಿಸುತ್ತಾರೆ? ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡುವವರೆಂದು ಜನರಿಗೆ ತೋರಿಸುವದಿಲ್ಲ. ತಮ್ಮ ಪೂರ್ವಿಕರು ಯೆಹೋವನೊಂದಿಗೆ ಮಾಡಿದ್ದ ಒಡಂಬಡಿಕೆಯನ್ನು ಅವರು ಮಾನ್ಯತೆ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬರೇ ದೇವರು ಸೃಷ್ಟಿಸಿದರಲ್ಲವೋ? ಏಕೆ ಪ್ರತಿಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಾಗಿ ನಡೆದು, ನಮ್ಮ ತಂದೆಗಳ ಒಡಂಬಡಿಕೆಯನ್ನು ಮುರಿಯುವುದೇಕೆ? ಅಧ್ಯಾಯವನ್ನು ನೋಡಿ |
“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.