ಮಲಾಕಿ 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜುದೇಯದ ಜನರು ದ್ರೋಹಮಾಡಿದ್ದಾರೆ. ಇಸ್ರಯೇಲಿನಲ್ಲಿಯೂ ಜೆರುಸಲೇಮಿನಲ್ಲಿಯೂ ದುರಾಚಾರ ನಡೆಯುತ್ತಿದೆ. ಯೆಹೂದ್ಯರು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ, ಸರ್ವೇಶ್ವರಸ್ವಾಮಿಗೆ ಪ್ರಿಯವಾದ ದೇವಾಲಯವನ್ನು ಹೊಲೆಗೆಡಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ ಯೆರೂಸಲೇವಿುನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯ ಮಗಳನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೂದದ ಜನರು ಬೇರೆ ಜನರಿಗೆ ಮೋಸ ಮಾಡಿದರು. ಜೆರುಸಲೇಮಿನಲ್ಲಿಯೂ ಇಸ್ರೇಲಿನಲ್ಲಿಯೂ ಇರುವ ಜನರು ಭಯಂಕರ ಕೃತ್ಯಗಳನ್ನು ಮಾಡಿದರು. ದೇವರು ತನ್ನ ಆಲಯವನ್ನು ಪ್ರೀತಿಸುತ್ತಾನೆ. ಆದರೆ ಯೆಹೂದದ ಜನರು ಗೊತ್ತಿಲ್ಲದ ದೇವತೆಗಳನ್ನು ಪೂಜಿಸಲು ಪ್ರಾರಂಭಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ. ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ, ಏಕೆಂದರೆ ಯೆಹೂದವು ಯೆಹೋವ ದೇವರು ಪ್ರೀತಿಮಾಡಿದ ಪರಿಶುದ್ಧ ಆಲಯವನ್ನು ಅಪವಿತ್ರ ಮಾಡಿ, ಅನ್ಯದೇವತೆಗಳನ್ನು ಆರಾಧಿಸುವ ಮಹಿಳೆಯರನ್ನು ಮದುವೆ ಮಾಡಿಕೊಂಡಿದೆ. ಅಧ್ಯಾಯವನ್ನು ನೋಡಿ |
ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂ ಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂ ಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ಥ್ಯವನ್ನಾಗಿ ಬಿಡುವಿರಿ’ ಎಂದು ಹೇಳಿದಿಯಲ್ಲಾ.