Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ನಿನಗೂ, ನಿನ್ನ ಯೌವನ ಪ್ರಾಯದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ, ನಿನ್ನ ಸಹಚರಿಣಿಯೂ, ನಿನ್ನ ಒಡಂಬಡಿಕೆಯ ಪತ್ನಿಯಾದ ಆಕೆಗೆ ದ್ರೋಹಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ಕಾರಣ ಇದೇ: ನಿನಗೂ ನಿನ್ನ ಹೆಂಡತಿಗೂ ಯೌವನದಲ್ಲಿ ಆದ ವಿವಾಹದ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ಸಾಕ್ಷಿ. ಆದರೂ ನಿನ್ನ ಅರ್ಧಾಂಗಿ ಹಾಗು ನ್ಯಾಯವಾದ ಧರ್ಮಪತ್ನಿ ಆದ ಆಕೆಗೆ ದ್ರೋಹಮಾಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದೇಕೆ ಅನ್ನುತ್ತೀರಾ? ನಿನಗೂ ನಿನ್ನ ಯೌವನದ ಹೆಂಡತಿಗೂ ಆದ ಒಡಂಬಡಿಕೆಗೆ ಯೆಹೋವನೇ ಸಾಕ್ಷಿಯಾಗಿದ್ದಾನಲ್ಲಾ. ನಿನ್ನ ಸಹಚಾರಿಣಿಯೂ ನಿನ್ನ ಒಡಂಬಡಿಕೆಯ ಪತ್ನಿಯೂ ಆದ ಆಕೆಗೆ ದ್ರೋಹಮಾಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನಮ್ಮ ಕಾಣಿಕೆಗಳನ್ನು ಯೆಹೋವನು ಏಕೆ ಸ್ವೀಕರಿಸುವುದಿಲ್ಲ?” ಎಂದು ನೀವು ಕೇಳಬಹುದು. ಯಾಕೆಂದರೆ ನಿಮ್ಮ ಪಾಪಕೃತ್ಯಗಳನ್ನು ಆತನು ನೋಡಿರುತ್ತಾನೆ. ಅವುಗಳಿಗೆ ವಿರೋಧವಾಗಿ ಆತನೇ ಸಾಕ್ಷಿಯಾಗಿರುತ್ತಾನೆ. ನಿಮ್ಮ ಹೆಂಡತಿಯರನ್ನು ನೀವು ಮೋಸಗೊಳಿಸಿದ್ದನ್ನು ಆತನು ನೋಡಿರುತ್ತಾನೆ. ನೀವು ಆಕೆಯನ್ನು ನಿಮ್ಮ ಯೌವನ ಕಾಲದಲ್ಲಿ ಹೆಂಡತಿಯನ್ನಾಗಿ ಮಾಡಿಕೊಂಡಿರುತ್ತೀರಿ. ಆಕೆಯು ನಿಮ್ಮ ಆಪ್ತ ಸ್ನೇಹಿತೆಯಾಗಿದ್ದಳು. ನೀವಿಬ್ಬರೂ ಮಾತುಕೊಟ್ಟಿರಿ. ಆಕೆ ನಿಮ್ಮ ಹೆಂಡತಿಯಾದಳು. ಆದರೆ ನೀವು ಅವಳಿಗೆ ಅಪನಂಬಿಗಸ್ಥರಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೂ ಯೆಹೋವ ದೇವರು ನಿನಗೂ, ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿದ್ದರು. ಆದರೂ ನಿನ್ನ ಜೊತೆಯವಳೂ, ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದವಳಿಗೆ ನೀನು ಅಪನಂಬಿಗಸ್ತನಾಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:14
22 ತಿಳಿವುಗಳ ಹೋಲಿಕೆ  

ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”


ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ” ಎಂಬುದು ನಿನ್ನ ದೇವರ ನುಡಿ.


ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.


ಮತ್ತು ಲಾಬಾನನು, “ನೀನು ನನ್ನ ಇಬ್ಬರು ಹೆಣ್ಣುಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ಮನುಷ್ಯರೊಳಗೆ ಯಾರೂ ಇಲ್ಲದಿದ್ದರೂ ದೇವರೇ ನಮ್ಮ ಒಡಂಬಡಿಕೆಗೆ ಸಾಕ್ಷಿ” ಎಂದನು.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವನು ನಿನ್ನ ಮೂಲಕ ನಮಗೆ ಕಳುಹಿಸುವ ಮಾತಿನಂತೆ ನಾವು ನಡೆಯದಿದ್ದರೆ ಯೆಹೋವನು ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು ನಮ್ಮನ್ನು ಖಂಡಿಸಲಿ!


ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.


ಅವಳು ತನ್ನ ಯೌವನಕಾಲದ ಕಾಂತನನ್ನು ತ್ಯಜಿಸಿ, ತನ್ನ ದೇವರ ಮುಂದೆ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಟ್ಟಿದ್ದಾಳೆ.


ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ.


ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.


ಜಾರಳ ನಡತೆಯು ಹೀಗೆಯೇ ಸರಿ, ಅವಳು ತಿಂದು ಬಾಯಿ ಒರೆಸಿಕೊಂಡು, “ನಾನು ತಪ್ಪುಮಾಡಲಿಲ್ಲವಲ್ಲವೆ” ಅಂದುಕೊಳ್ಳುವಳು.


ಆಹಾ, ನನ್ನ ಪ್ರಿಯಳೇ, ನೀನು ಎಷ್ಟು ಚೆಲುವೆ, ಆಹಾ, ನೀನು ಎಷ್ಟು ಸುಂದರಿ! ನಿನ್ನ ನೇತ್ರಗಳು ಪಾರಿವಾಳಗಳಂತಿವೆ.


ಸಮುವೇಲನು ಪುನಃ “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲ ಎಂಬುದಕ್ಕೆ ಯೆಹೋವನೂ ಆತನ ಅಭಿಷಿಕ್ತನೂ ಸಾಕ್ಷಿಯಾಗಿದ್ದಾರೆ” ಎಂದನು. ಅವರು, “ಹೌದು, ಯೆಹೋವನೇ ಸಾಕ್ಷಿಯಾಗಿದ್ದಾನೆ” ಎಂದು ಹೇಳಿದರು.


ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.


“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.


ಅವರು ಅವನಿಗೆ, “ಹಾಗೆಯೇ ಮಾಡುವೆವು; ನಮ್ಮಿಬ್ಬರ ಈ ಮಾತುಗಳಿಗೆ ಯೆಹೋವನೇ ಸಾಕ್ಷಿ” ಎಂದು ಉತ್ತರಕೊಟ್ಟರು.


“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.


ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.


ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ, ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?


ಇವರು ಇಸ್ರಾಯೇಲಿನಲ್ಲಿ ದುರಾಚಾರವನ್ನು ನಡೆಸಿ, ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರಮಾಡಿ, ನಾನು ಆಜ್ಞಾಪಿಸದ ಮಾತುಗಳನ್ನು ನನ್ನ ಹೆಸರಿನ ಮೇಲೆ ಸುಳ್ಳಾಗಿ ಸಾರಿದಿರಲ್ಲಾ; ನಾನೇ ಬಲ್ಲೆ, ನಾನೇ ಸಾಕ್ಷಿ ಎಂದು ಯೆಹೋವನು ಅನ್ನುತ್ತಾನೆ” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು