ಮಲಾಕಿ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದೇವರು ನಿನ್ನ ಮತ್ತು ಆಕೆಯ ತನುಮನಗಳನ್ನು ಒಂದಾಗಿ ಮಾಡಲಿಲ್ಲವೆ? ಅವರ ಉದ್ದೇಶವಾದರೂ ಏನಾಗಿತ್ತು? ದೇವರ ಮಕ್ಕಳಾಗಿ ಬಾಳುವ ಸಂತಾನಪ್ರಾಪ್ತಿಯೇ ಅವರ ಉದ್ದೇಶವಾಗಿತ್ತು. ಆದಕಾರಣ ಯೌವ್ವನದಲ್ಲಿ ಮಡದಿಗೆ ದ್ರೋಹವೆಸಗದಂತೆ, ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಪರಮಾತ್ಮಾಂಶನಾದ ಯಾವನೂ ಹೀಗೆ ಮಾಡಲಿಲ್ಲ; ಆ ಪ್ರಸಿದ್ಧನೊಬ್ಬನು ಏಕೆ ಇಂಥ ಕೃತ್ಯಮಾಡಿದನು? ದೇವರ ವರವಾದ ಸಂತಾನವನ್ನು ಹಾರೈಸಿಯೇ. ಹೀಗಿರಲು ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ಯಾವನೂ ತನ್ನ ಯೌವನದ ಪತ್ನಿಗೆ ದ್ರೋಹಮಾಡದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವರ ಇಚ್ಫೆಗನುಸಾರವಾಗಿ ಗಂಡಹೆಂಡತಿಯರು ದೇಹದಲ್ಲಿಯೂ ಆತ್ಮದಲ್ಲಿಯೂ ಒಂದಾಗಿರಬೇಕು. ಆಗ ಅವರ ಮಕ್ಕಳೂ ಪರಿಶುದ್ಧರಾಗಿರುವರು. ಆದ್ದರಿಂದ ಆತ್ಮಿಕ ಅನ್ಯೋನ್ಯತೆಯನ್ನು ಕಾಪಾಡಿಕೊಳ್ಳಿ. ನಿಮ್ಮ ಹೆಂಡತಿಯರಿಗೆ ಮೋಸಮಾಡಬೇಡಿ. ಯಾಕೆಂದರೆ ಯೌವನ ಪ್ರಾಯದಿಂದಲೂ ಆಕೆ ನಿಮ್ಮ ಹೆಂಡತಿಯಾಗಿದ್ದಾಳೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ. ಅಧ್ಯಾಯವನ್ನು ನೋಡಿ |