Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 2:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಈಗಲಾದರೋ ಯಾಜಕರೇ, ನೀವು ದಾರಿ ತಪ್ಪಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರು ಮುಗ್ಗರಿಸಿಬೀಳುವಂತೆ ಮಾಡಿದ್ದೀರಿ. ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ.” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವೋ ದಾರಿತಪ್ಪಿದ್ದೀರಿ; ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ, ಇದು ಸೇನಾಧೀಶ್ವರ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಆದರೆ ಯಾಜಕರೇ, ನೀವು ನನ್ನನ್ನು ಹಿಂಬಾಲಿಸುವದನ್ನು ನಿಲ್ಲಿಸಿ ಬಿಟ್ಟಿರಿ. ಅನೇಕ ಜನರು ತಪ್ಪು ದಾರಿಯಲ್ಲಿ ಹೋಗುವಂತೆ ಮಾಡಲು ನೀವು ಉಪದೇಶವನ್ನು ಬಳಸಿಕೊಂಡಿರಿ. ಲೇವಿಯೊಂದಿಗೆ ಮಾಡಿದ ಒಡಂಬಡಿಕೆಯನ್ನು ನೀವು ಹಾಳುಮಾಡಿಬಿಟ್ಟಿರಿ.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರನ್ನು ಎಡವುವಂತೆ ಮಾಡಿದ್ದೀರಿ. ಲೇವಿಯರೊಂದಿಗಿನ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 2:8
34 ತಿಳಿವುಗಳ ಹೋಲಿಕೆ  

ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


“ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ, ಸುಖ ತರುವಂಥ ಒಡಂಬಡಿಕೆ. ಅವರು ಭಯ ಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದೆನು. ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಹೆದರಿ ನಡೆದುಕೊಂಡರು.


“‘ಇಸ್ರಾಯೇಲರು ನನ್ನನ್ನು ತೊರೆದು, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ದೋಷಫಲವನ್ನು ಅನುಭವಿಸುವರು.


ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.


ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ.


ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು.


ಸಹೋದರರೇ, ಜೀವಸ್ವರೂಪನಾದ ದೇವರನ್ನು ತ್ಯಜಿಸಿ ಬಿಡುವ ಅಪನಂಬಿಕೆಯುಳ್ಳ ದುಷ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರದಂತೆ ಜಾಗರೂಕರಾಗಿ ನೋಡಿಕೊಳ್ಳಿರಿ.


ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.


ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ.


ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ಅವರಿಂದ ನಡೆಸಲ್ಪಟ್ಟವರು ನಾಶವಾಗಿದ್ದಾರೆ.


ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ, ಏಕೆಂದರೆ ನೀನು ನನಗೆ ಬೋಧಿಸಿದ್ದೀ.


ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.


ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೆಯದಲ್ಲ.


ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.


ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.


ಆದಕಾರಣ ನಾನು ಅವನ ಸಂಗಡ ಸ್ನೇಹದ ಒಡಂಬಡಿಕೆ ಮಾಡಿಕೊಳ್ಳುತ್ತೇನೆ ಎಂದು ಎಲ್ಲರಿಗೂ ತಿಳಿಸು.


ಅವನಿಗೂ, ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ಒಡಂಬಡಿಕೆ ಮಾಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಹೆಚ್ಚಿಸಿ ಇಸ್ರಾಯೇಲರಿಗೋಸ್ಕರ ದೋಷಪರಿಹಾರವನ್ನು ಮಾಡಿದುದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ” ಎಂದು ಹೇಳಿದನು.


ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.


ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟಿದ್ದರಿಂದ ಇನ್ನು ನನಗೆ ಯಾಜಕಸೇವೆ ಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು. ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ, ನಾನು ನಿಮ್ಮ ಸಂತತಿಯವರನ್ನು ಮರೆತು ಬಿಡುವೆನು.


ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.


ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.


ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.


ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಭಂಗಮಾಡಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರ ಮಾಡಿದ್ದಾರೆ; ಮೀಸಲಾದದ್ದಕ್ಕೂ, ಮೀಸಲಿಲ್ಲದ್ದಕ್ಕೂ ಭೇದವೆಣಿಸಲಿಲ್ಲ, ಶುದ್ಧವಾದ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯದಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.


ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆ ಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿಯಾದ ವಿಘ್ನವಾದುದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸಲೇಬೇಕು.’ ಇದು ಕರ್ತನಾದ ಯೆಹೋವನ ನುಡಿ.


“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು