ಮಲಾಕಿ 3:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇಂಥ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತಾಡಿಕೊಳ್ಳಲು ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವರನ್ನು ಅನುಸರಿಸುವ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು ಯೆಹೋವನು ಆಲೈಸಿದನು. ಆತನ ಮುಂದೆ ದೇವಜನರ ಹೆಸರುಗಳನ್ನು ಬರೆದಿರುವ ಒಂದು ಪುಸ್ತಕವಿತ್ತು. ಯೆಹೋವನ ಹೆಸರನ್ನು ಘನಪಡಿಸುವವರ ಹೆಸರುಗಳು ಅದರಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.