Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನುಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆತನು ಲೇವಿಯರನ್ನು ಶುದ್ಧಮಾಡುವನು. ಅವರನ್ನು ಬೆಂಕಿಯಿಂದ ಪರಿಶುದ್ಧ ಮಾಡುವನು. ಶುದ್ಧ ಬೆಳ್ಳಿ ಚಿನ್ನದಂತೆ ಆತನು ಅವರನ್ನು ಶುದ್ಧಿಮಾಡುವನು. ಆಗ ಅವರು ಯೆಹೋವನಿಗೆ ಕಾಣಿಕೆಗಳನ್ನು ತರುವರು; ಸರಿಯಾದ ರೀತಿಯಲ್ಲಿ ಕಾಣಿಕೆಗಳನ್ನು ಅರ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರು ಬೆಳ್ಳಿಯನ್ನು ಪರಿಶೋಧಿಸಿ ಶುದ್ಧೀಕರಿಸುವ ಅಕ್ಕಸಾಲಿಗನಂತೆ ಕುಳಿತುಕೊಂಡು ಲೇವಿಯರನ್ನು ಶುದ್ಧಮಾಡುವರು. ಬಂಗಾರದ ಹಾಗೆಯೂ, ಬೆಳ್ಳಿಯ ಹಾಗೆಯೂ ಶುದ್ಧಮಾಡುವರು. ಆಗ ಅವರು ಯೆಹೋವ ದೇವರಿಗೆ ನೀತಿಯ ಕಾಣಿಕೆಯನ್ನು ಅರ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:3
48 ತಿಳಿವುಗಳ ಹೋಲಿಕೆ  

ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.


ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು, ಹೃದಯಗಳನ್ನು ಶೋಧಿಸುವವನು ಯೆಹೋವನೇ.


ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು; ದುಷ್ಟರು ದುಷ್ಟರಾಗಿಯೇ ನಡೆಯುವರು, ಅವರಲ್ಲಿ ಯಾರಿಗೂ ವಿವೇಕವಿರದು; ಜ್ಞಾನಿಗಳಿಗೆ ವಿವೇಕವಿರುವುದು.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.


ದೇವರೇ, ನಮ್ಮನ್ನು ಶೋಧಿಸಿದಿ; ಬೆಳ್ಳಿಯನ್ನು ಪುಟಕ್ಕೆ ಹಾಕುವ ಮೇರೆಗೆ ಶುದ್ಧಿಮಾಡಿದಿ.


ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ.


ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.


ಯೋಹಾನನು ಅವರೆಲ್ಲರಿಗೆ, “ನಾನಂತೂ ನಿಮಗೆ ನೀರಿನ ದೀಕ್ಷಾಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮನಲ್ಲಿಯೂ ಮತ್ತು ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಮಾಡಿಸುವನು.


ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯಾಗುವುದು.


ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸವಿಡಿರಿ.


ನಮ್ಮನ್ನು ದೇವರ ರಾಜ್ಯವನ್ನಾಗಿಯೂ ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದಾತನಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು ಬಲವು ಉಂಟಾಗಲಿ. ಆಮೆನ್.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.


ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.


ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.


ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.


ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”


ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”


ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.


ಆಗ ಜನರು ನ್ಯಾಯವಾದ ಯಜ್ಞಗಳನ್ನೂ, ಸರ್ವಾಂಗಹೋಮಗಳನ್ನೂ ಸಮರ್ಪಿಸಿ, ದೇವರೇ ನಿನಗೆ ಸಂತೋಷವನ್ನು ಉಂಟುಮಾಡುವರು. ನಿನ್ನ ಯಜ್ಞವೇದಿಯ ಮೇಲೆ ಹೋರಿಗಳನ್ನು ಸಮರ್ಪಿಸುವರು.


ಹೀಗಿರಲು ಸೇನಾಧೀಶ್ವರನಾದ ಯೆಹೋವನು, “ಆಹಾ, ನಾನು ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಪುಟಕ್ಕೆ ಹಾಕಿ ಶೋಧಿಸುವೆನು.


ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು.


ಜ್ಞಾನಿಗಳಲ್ಲಿಯೂ ಕೆಲವರು ಅಂತ್ಯಕಾಲದವರೆಗೆ ಬೀಳುತ್ತಿರುವರು. ಆದುದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ನಿಶ್ಚಿತಕಾಲದಲ್ಲೇ ಆಗುವುದು.


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


“ನೀನು ಇಸ್ರಾಯೇಲರಿಂದ ಲೇವಿಯರನ್ನು ಪ್ರತ್ಯೇಕಿಸಿ ಶುದ್ಧೀಕರಿಸಿಬೇಕು.


“ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು