Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಅಂದರೆ ಈ ಜನಾಂಗದವರೆಲ್ಲಾ ನನ್ನಿಂದ ಕದ್ದುಕೊಳ್ಳುವವರಾದ ಕಾರಣ ಶಾಪಗ್ರಸ್ತರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವೂ ನಿಮ್ಮ ಜನಾಂಗವೆಲ್ಲವೂ ನನಗೆ ಮೋಸಮಾಡುವುದರಿಂದ ನೀವೆಲ್ಲರೂ ಶಾಪಗ್ರಸ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಅಂದರೆ ಈ ಜನಾಂಗದವರೆಲ್ಲಾ ನನ್ನಿಂದ ಕದ್ದುಕೊಳ್ಳುವವರಾದ ಕಾರಣ ಶಾಪಗ್ರಸ್ತರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ರೀತಿಯಾಗಿ ನಿಮ್ಮ ಇಡೀ ಜನಾಂಗವೇ ನನ್ನಿಂದ ಕದ್ದುಕೊಂಡಿದ್ದಾರೆ. ಆದ್ದರಿಂದ ನಿಮಗೆ ದುರ್ದೆಶೆ ಸಂಭವಿಸುತ್ತಲಿದೆ.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದರಿಂದ ಶಾಪವು ನಿಮಗಾಯಿತು, ಏಕೆಂದರೆ ನೀವು, ಈ ಸಮಸ್ತ ಜನಾಂಗವೇ ನನ್ನಲ್ಲಿ ಕಳ್ಳತನ ಮಾಡುತ್ತಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 3:9
8 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.


ಜೆರಹನ ಮಗನಾದ ಆಕಾನನು ಯೆಹೋವನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದಾಗ ಯೆಹೋವನ ಕೋಪವು ಇಸ್ರಾಯೇಲ್ಯರ ಸರ್ವಸಭೆಯ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಅನೇಕರು ಸಾಯಬೇಕಾಯಿತಲ್ಲಾ” ಎಂದು ಹೇಳಿದನು.


ಆದಕಾರಣ ನಾನು ಪವಿತ್ರಾಲಯದ ಪ್ರಧಾನರನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗೂ ಒಪ್ಪಿಸಿಬಿಟ್ಟಿದ್ದೇನೆ.”


ಆಗ ದೂತನು ನನಗೆ, “ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪವು ಇದೇ. ಕಳ್ಳತನ ಮಾಡುವ ಪ್ರತಿಯೊಬ್ಬರೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವರು. ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳು ಸಾಕ್ಷಿಯೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು