Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಲಾಕಿ 4:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಲಾಕಿ 4:2
57 ತಿಳಿವುಗಳ ಹೋಲಿಕೆ  

ಇಗೋ, ನಾನು ಈ ಪಟ್ಟಣವನ್ನು ಜೀರ್ಣೋದ್ಧಾರಮಾಡಿ, ಅದಕ್ಕೆ ಸಮಾಧಾನವನ್ನು ಕೊಟ್ಟು, ನಿವಾಸಿಗಳನ್ನು ಗುಣಪಡಿಸುವೆನು. ಸ್ಥೈರ್ಯ ಸಮಾಧಾನಗಳನ್ನು ಸಮೃದ್ಧಿಯಾಗಿ ಅವರ ಅನುಭವಕ್ಕೆ ತರುವೆನು.


ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?


ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು.


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.


ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.


“ಯೇಸುವೆಂಬ ನಾನು ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ ಅವನ ಸಂತತಿಯೂ ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”


ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.


ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ, ಮೋಡಗಳನ್ನು ಚದುರಿಸಿಬಿಟ್ಟು, ಮಳೆಬಿದ್ದ ಭೂಮಿಯಿಂದ ಹುಲ್ಲನ್ನು ಮೊಳೆಯಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.


ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳು ಒಂದೊಂದ್ದು ತರಹದ ಫಲವನ್ನು ಬಿಡುತ್ತಾ ಹನ್ನೆರಡು ತರಹದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗಗಳವರನ್ನು ವಾಸಿಮಾಡುವಂಥದಾಗಿದ್ದವು.


ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.


ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.


ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.


ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ,


ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.


ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.


ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.


ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.


ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.


ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು.


ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ನದಿಯ ಎರಡು ದಡಗಳ ತನಕ ಸಕಲ ಫಲವೃಕ್ಷಗಳು ಬೆಳೆಯುವವು. ಅವುಗಳ ಎಲೆ ಬಾಡುವುದಿಲ್ಲ, ಹಣ್ಣು ತೀರುವುದಿಲ್ಲ; ನದಿಯ ನೀರು ಪವಿತ್ರಾಲಯದಿಂದ ಹೊರಟು ಬರುವ ಕಾರಣ ಅವು ತಿಂಗಳುಗಳ ಪ್ರಕಾರ ಹೊಸ ಫಲವನ್ನು ಫಲಿಸುವವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಉಪಯೋಗವಾಗುವುದು.”


ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ.


ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು.


ನೀತಿವಂತರ ಮಾರ್ಗವು ಮಧ್ಯಾಹ್ನದ ವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವುದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವುದು.


ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ


ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.


ಆದರೂ ನಾನು ನಿಮಗೆ ಬರೆಯುವುದು ಹೊಸ ಆಜ್ಞೆಯಂತೆಯೇ ಇರುವುದು. ಇದು ಆತನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ನಿಜವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು.


ಆತನು ಅನ್ಯಜನರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೀರ್ತಿ” ಅಂದನು.


ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯೆಯು ತಲತಲಾಂತರದ ವರೆಗೂ ಇರುವುದು.


“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.


ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು.


ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”


“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.


“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.


ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.


ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು