Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವರ ಪುತ್ರರಾದ ಯೇಸುಕ್ರಿಸ್ತರ ಶುಭಸಂದೇಶ. ಇದು ಪ್ರವಾದಿ ಯೆಶಾಯನು ಮೊದಲೇ ಬರೆದಿಟ್ಟ ಪ್ರಕಾರ ಪ್ರಾರಂಭವಾಯಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾದ ಸುವಾರ್ತೆಯ ಪ್ರಾರಂಭವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವಕುಮಾರನಾದ ಯೇಸು ಕ್ರಿಸ್ತನನ್ನು ಕುರಿತ ಸುವಾರ್ತೆಯ ಆರಂಭವಿದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವಪುತ್ರರಾದ ಯೇಸುಕ್ರಿಸ್ತರ ಸುವಾರ್ತೆಯ ಆರಂಭ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದೆವಾಚ್ಯಾ ಲೆಕಾಚಿ, ಜೆಜು ಕ್ರಿಸ್ತಾಚಿ ಬರಿ ಖಬರ್ ಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:1
23 ತಿಳಿವುಗಳ ಹೋಲಿಕೆ  

ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,


ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.


ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.


“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.


ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.


ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.


ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?


ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು