Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಸಿಮೋನನನ್ನೂ ಆತನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾದ ಇವರು ಸರೋವರದಲ್ಲಿ ಬಲೆಬೀಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹೀಗಿರುವಲ್ಲಿ ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನೂ ಸೀಮೋನನ ತಮ್ಮನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆಬೀಸುವದನ್ನು ಕಂಡನು. ಅವರು ಬೆಸ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸು ಗಲಿಲಾಯ ಸರೋವರದ ಬಳಿ ನಡೆದುಹೋಗುತ್ತಿದ್ದಾಗ ಸೀಮೋನನನ್ನು ಮತ್ತು ಸೀಮೋನನ ಸಹೋದರನಾದ ಅಂದ್ರೆಯನನ್ನು ಕಂಡನು. ಇವರಿಬ್ಬರೂ ಬೆಸ್ತರಾಗಿದ್ದರು. ಇವರು ಮೀನುಗಳನ್ನು ಹಿಡಿಯಲು ಸರೋವರದೊಳಕ್ಕೆ ಬಲೆಯನ್ನು ಬೀಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಸೀಮೋನನು ಮತ್ತು ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಜೆಜು ಗಾಲಿಲಿಯಾ ಮನ್ತಲ್ಯಾ ಸಮುಂದರಾಚ್ಯಾ ದಂಡೆನ್ ಅಸೆಚ್ ಚಲುನ್ಗೆತ್ ಜವ್‍ಲಾಗಲ್ಲೊ. ಥೈ ಸಿಮಾವ್, ಅನಿ ತೆಚೊ ಧಾಕ್ಲೊ ಭಾವ್ ಅಂದ್ರು, ತೆಕಾ ದಿಸ್ಲೆ. ಹೆನಿ ಮಾಸೊಳ್ಯಾ ಧರ್ತಲಿ ಮಾನ್ಸಾ, ಮಾಸೊಳ್ಯಾ ಧರುಕ್ ಮನುನ್ ತೆನಿ ಸಮುಂದರಾತ್ ಜಾಳೆ ಸೊಡುಲಾಗಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:16
11 ತಿಳಿವುಗಳ ಹೋಲಿಕೆ  

ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ;


ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,


ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.


ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು.


ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,


ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.


ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು