Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅನಂತರ ಯೇಸು ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾಮಂದಿರಗಳಲ್ಲಿ ಪ್ರಬೋಧಿಸುತ್ತಾ ದೆವ್ವಗಳನ್ನು ಬಿಡಿಸುತ್ತಾ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಹೀಗೆ ಯೇಸು ಗಲಿಲಾಯದ ಎಲ್ಲಾ ಕಡೆಗೆ ಪ್ರವಾಸಮಾಡಿ ಸಭಾಮಂದಿರಗಳಲ್ಲಿ ಉಪದೇಶಿಸಿದನು; ದೆವ್ವಗಳಿಂದ ಪೀಡಿತರಾಗಿದ್ದವರನ್ನು ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆದ್ದರಿಂದ ಯೇಸು ಗಲಿಲಾಯ ಪ್ರಾಂತವನ್ನೆಲ್ಲಾ ಸಂಚರಿಸಿ, ಅವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೆವ್ವಗಳನ್ನು ಓಡಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಅಶೆ ಜೆಜುನ್ ಗಾಲಿಲಿಯಾ ಮನ್ತಲ್ಯಾ ಪ್ರಾಂತ್ಯಾತ್ ಸಗ್ಳ್ಯಾಕ್ಡೆ ಫಿರುನ್, ಸಿನಾಗೊಗಾತ್ನಿ ಜಾವ್ನ್, ಬರಿ ಖಬರ್ ಸಾಂಗ್ಲ್ಯಾನ್, ಅನಿ ಗಿರೊಲಾಗಲ್ಲ್ಯಾಂಚಿ ಗಿರೆ ಸೊಡ್ಸುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:39
10 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.


ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.


ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.


ತರುವಾಯ ಯೇಸು ಎಲ್ಲಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚರಿಸುತ್ತಾ ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.


ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.


ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು.


ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು