Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಒಮ್ಮೆ ಕುಷ್ಠರೋಗಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, ಮೊಣಕಾಲೂರಿ, “ತಾವು ಮನಸ್ಸುಮಾಡಿದ್ದಲ್ಲಿ ನನ್ನನ್ನು ಗುಣಮಾಡಬಲ್ಲಿರಿ,” ಎಂದು ದೈನ್ಯದಿಂದ ಬೇಡಿಕೊಂಡನು. ಯೇಸುವಿನ ಮನ ಕರಗಿತು. ಅವರು ಕೈಚಾಚಿ, ಕುಷ್ಠರೋಗಿಯನ್ನು ಮುಟ್ಟಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು - ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ ಎಂದು ಬೇಡಿಕೊಳ್ಳಲು ಆತನು ಕನಿಕರಪಟ್ಟು ಕೈನೀಡಿ ಅವನನ್ನು ಮುಟ್ಟಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ ಆತನಿಗೆ, “ನೀನು ಇಷ್ಟಪಟ್ಟರೆ, ನನ್ನನ್ನು ಗುಣಪಡಿಸಬಲ್ಲೆ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಕುಷ್ಠರೋಗಿಯಾಗಿದ್ದ ಒಬ್ಬನು ಯೇಸುವಿನ ಬಳಿಗೆ ಬಂದು, ಮೊಣಕಾಲೂರಿ, “ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಎಕ್ ದಿಸ್ ಎಕ್ ಕುಸ್ಟ್ ರೊಗ್‍ ಲಾಗಲ್ಲೊ ಮಾನುಸ್ ಜೆಜುಚ್ಯಾ ಪಾಂಯಾತ್ ಡೊಗ್ಲಾ ಘಾಲುನ್ “ಜೆಜು ತಿಯಾ ಮನ್ ಕರ್ಲ್ಯಾರ್, ಮಾಕಾ ಗುನ್ ಕರುಕ್ ಹೊತಾ” ಮನುನ್ ರಡುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:40
20 ತಿಳಿವುಗಳ ಹೋಲಿಕೆ  

ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ,


ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.


ಅಲ್ಲಿಂದ ಯೇಸು ಪ್ರಯಾಣವನ್ನು ಪ್ರಾರಂಭಿಸಿದಾಗ, ದಾರಿಯಲ್ಲಿ ಒಬ್ಬನು ಓಡುತ್ತಾ ಆತನ ಎದುರಿಗೆ ಬಂದು ಮೊಣಕಾಲೂರಿ, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯಸ್ಥನಾಗಬೇಕಾದರೆ ಏನು ಮಾಡಬೇಕೆಂದು” ಆತನನ್ನು ಕೇಳಿದನು.


ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು.


ಆ ಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ,


ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.


ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.


ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?


ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು” ಎಂದು ಹೇಳಿದನು.


ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು,


ಸೊಲೊಮೋನನು ಐದು ಮೊಳ ಉದ್ದವೂ, ಐದು ಮೊಳ ಅಗಲವೂ, ಮೂರು ಮೊಳ ಎತ್ತರವೂ ಆಗಿರುವ ಒಂದು ತಾಮ್ರದ ಯಜ್ಞವೇದಿಯನ್ನು ಮಾಡಿಸಿ ಅದನ್ನು ಅಂಗಳದ ಮಧ್ಯದಲ್ಲಿ ಇರಿಸಿದನು, ಆತನು ಅದರ ಮೇಲೆ ಮೊಣಕಾಲೂರಿ ನಿಂತನು. ಅವನು ಇಸ್ರಾಯೇಲರ ಸಮ್ಮುಖದಲ್ಲಿ ಆಕಾಶದ ಕಡೆಗೆ ತನ್ನ ಕೈಗಳನ್ನೆತ್ತಿ,


ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು