Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಆದರೆ ಅವನು ಹೊರಟುಹೋಗಿ ಆ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸಿದ್ದರಿಂದ ಯೇಸು ಬಹಿರಂಗವಾಗಿ ಇನ್ನು ಯಾವ ಊರೊಳಕ್ಕೂ ಹೋಗಲಾರದೆ ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು. ಮತ್ತು ಜನರು ನಾಲ್ಕು ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಅವನು ಅಲ್ಲಿಂದ ಹೋಗಿ ಯೇಸುವೇ ತನ್ನನ್ನು ಗುಣಪಡಿಸಿದನೆಂದು ಜನರೆಲ್ಲರಿಗೆ ತಿಳಿಸಿದನು. ಈ ಸುದ್ದಿಯು ಎಲ್ಲೆಡೆ ಹರಡಿದ್ದರಿಂದ ಆತನು ಬಹಿರಂಗವಾಗಿ ಊರೊಳಗೆ ಹೋಗಲು ಸಾಧ್ಯವಾಗದೆ ಏಕಾಂತವಾದ ಸ್ಥಳಗಳಲ್ಲಿ ವಾಸಿಸಬೇಕಾಯಿತು. ಆದರೂ ಎಲ್ಲಾ ಕಡೆಗಳಿಂದ ಜನರು ಯೇಸುವಿದ್ದಲ್ಲಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆದರೆ ಅವನು ಹೋಗಿ ಈ ವಿಷಯವನ್ನು ಎಲ್ಲಾ ಕಡೆಗಳಲ್ಲಿ ಹಬ್ಬಿಸಿದನು. ಇದರ ಪರಿಣಾಮವಾಗಿ ಯೇಸು ಯಾವ ಊರೊಳಗೂ ಬಹಿರಂಗವಾಗಿ ಪ್ರವೇಶಿಸಲಾಗದೆ, ನಿರ್ಜನ ಪ್ರದೇಶಗಳಲ್ಲಿರುತ್ತಿದ್ದರು. ಆದರೂ ಜನರು ಎಲ್ಲಾ ಕಡೆಗಳಿಂದ ಯೇಸುವಿನ ಬಳಿಗೆ ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಖರೆ ತೊ ಥೈತ್ನಾ ಗೆಲೊ, ಅನಿ ಸಗ್ಳ್ಯಾಕ್ಡೆ ಹಿ ಖಬರ್ ಸಾಂಗುನ್ಗೆತ್ ಗೆಲೊ. ತಸೆ ಮನುನ್ ಜೆಜುಕ್, ಖಲ್ಯಾಬಿ ಗಾಂವಾತ್ ಬಹಿರಂಗ್ ಫಿರುಕ್ ಹೊವುಕ್ನಾ. ತೆಕಾ ಕೊನ್ ಲೊಕಾ ನಸಲ್ಲೆ ಜಾಗೆ ಬಗುನ್, ರ್‍ಹಾತಲೆ ಪಡ್ಲೆ. ಜಾಲ್ಯಾರ್‍ಬಿ ಸಗ್ಳ್ಯಾಕ್ನಾ ಲೊಕಾ ಜೆಜುಕ್ಡೆ ಯೆಂವ್ಗೆತುಚ್ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:45
12 ತಿಳಿವುಗಳ ಹೋಲಿಕೆ  

ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು.


ಆದರೆ ಅವರು ಹೊರಟುಹೋಗಿ ಆ ದೇಶದೊಳಗೆಲ್ಲಾ ಆತನ ಸುದ್ದಿಯನ್ನು ಹಬ್ಬಿಸಿದರು.


ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು.


ಯೆಹೋವನ ಕೃತ್ಯಗಳನ್ನು ವರ್ಣಿಸುವೆನು; ಪೂರ್ವದಿಂದ ನೀನು ನಡೆಸಿದ ಅದ್ಭುತಗಳನ್ನು ನೆನಪು ಮಾಡಿಕೊಳ್ಳುವೆನು.


ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.


ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.


ಅನೇಕರು, ಪ್ರಮುಖವಾಗಿ ಸುನ್ನತಿಹೊಂದಿದವರು, ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ.


ಈ ಸುದ್ದಿ ಆ ದೇಶದೊಳಗೆಲ್ಲಾ ಹಬ್ಬಿತು.


ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.


ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು