Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಜುದೇಯ ಪ್ರಾಂತ್ಯದ ಎಲ್ಲೆಡೆಗಳಿಂದಲೂ ಜೆರುಸಲೇಮಿನಿಂದಲೂ ಜನರು ಆತನ ಬಳಿಗೆ ಹೋಗುತ್ತಿದ್ದರು. ಅವರು ತಮ್ಮ ಪಾಪಗಳನ್ನು ಒಪ್ಪಿಕೊಳ್ಳುತ್ತಾ ಜೋರ್ಡನ್ ನದಿಯಲ್ಲಿ ಆತನಿಂದ ಸ್ನಾನದೀಕ್ಷೆ ಪಡೆದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇವಿುನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜುದೇಯ ಮತ್ತು ಜೆರುಸಲೇಮಿನ ಜನರೆಲ್ಲರೂ ಯೋಹಾನನ ಬಳಿಗೆ ಬಂದು ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡರು. ಆಗ ಯೋಹಾನನು ಅವರಿಗೆ ಜೋರ್ಡನ್ ನದಿಯಲ್ಲಿ ದೀಕ್ಷಾಸ್ನಾನ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೂದಾಯ ಪ್ರಾಂತದ ಎಲ್ಲಾ ಹಳ್ಳಿಗಳಿಂದ ಮತ್ತು ಯೆರೂಸಲೇಮ್ ನಗರದಿಂದ ಎಲ್ಲಾ ಜನರು ಅವನ ಬಳಿಗೆ ಬರುತ್ತಿದ್ದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜುದೆಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಸಾಂದಿ-ಮುಲ್ಲ್ಯಾನಿತ್ನಾ, ಅನಿ ಜೆರುಜಲೆಮಾತ್ನಾ ಲೈ ಲೊಕಾ ಜುವಾಂವಾಕ್ಡೆ ಯೆವ್ನ್, ಅಪ್ನಾಚ್ಯಾ ಸಗ್ಳ್ಯಾ ಚುಕಾ ಒಳ್ಕುನ್ ಘೆವ್ನ್, ಜೊರ್ದಾನ್ ನ್ಹಯ್ತ್, ಜುಂವಾವಾಕ್ನಾ ಬಾಲ್ತಿಮ್‍ ಘೆವ್‍ಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:5
15 ತಿಳಿವುಗಳ ಹೋಲಿಕೆ  

ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.


ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.


ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಯಲ್ಲಿರುವ ಬೇಥಾನ್ಯ ಎಂಬ ಊರಿನಲ್ಲಿ ನಡೆಯಿತು.


ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ


ಆಗ ಯೆಹೋಶುವನು ಆಕಾನನಿಗೆ “ನನ್ನ ಮಗನೇ, ನೀನು ಇಸ್ರಾಯೇಲರ ದೇವರಾದ ಯೆಹೋವನನ್ನು ಘನಪಡಿಸಿ ಆತನಿಗೆ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ನನಗೆ ಹೇಳು, ಯಾವುದನ್ನೂ ಮುಚ್ಚಿಡಬೇಡ” ಅಂದನು.


ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.


ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.


ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು