Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೇಸುವಿನ ಈ ಮಾತನ್ನು ಕೇಳುತ್ತಲೇ ಅವನ ಮುಖ ಪೆಚ್ಚಾಯಿತು. ಅವನು ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟುಹೋದನು. ಏಕೆಂದರೆ ಅವನಿಗೆ ಅಪಾರ ಆಸ್ತಿಯಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದದರಿಂದ ಈ ಮಾತಿಗೆ ಮೋರೆ ಬಾಡಿದವನಾಗಿ ದುಃಖದಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸುವಿನ ಈ ಮಾತನ್ನು ಕೇಳಿ ಅವನು ನಿರಾಶೆಯಿಂದ ದುಃಖಗೊಂಡು ಹೊರಟುಹೋದನು. ಬಹಳ ಧನವಂತನಾಗಿದ್ದ ಅವನು ತನ್ನ ಅಪಾರ ಆಸ್ತಿಯನ್ನು ಮಾರಲು ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಹೆ ಆಯ್ಕುನ್ ತೆಚೆ ತೊಂಡ್ ಬಾಡ್ಲೆ, ಅನಿ ತೊ ಬೆಜಾರಾನ್ ಥೈತ್ನಾ ಗೆಲೊ. ಕಶ್ಯಾಕ್ ಮಟ್ಲ್ಯಾರ್ ತೊ ಲೈ ಸಾವ್ಕಾರ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:22
20 ತಿಳಿವುಗಳ ಹೋಲಿಕೆ  

ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.


ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.


ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.


ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು.


ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.


ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.


ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.


ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.


ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಆಗ ಯೇಸುವು ಸುತ್ತಲೂ ನೋಡಿ ತನ್ನ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ತುಂಬಾ ಕಷ್ಟ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು