Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವರಿಗೆ, “ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ, ಪರಕೀಯರ ಕೈಗೊಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ. ಮತ್ತು ಮನುಷ್ಯಕುಮಾರನನ್ನು ಮಹಾಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಹಿಡುಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಅನ್ಯರ ಕೈಗೆ ಒಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಮನುಷ್ಯಕುಮಾರನನ್ನು ಮಹಾಯಾಜಕರಿಗೂ ಧರ್ಮೋಪದೇಶಕರಿಗೂ ಒಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆ ವಿಧಿಸಿ ಯೆಹೂದ್ಯರಲ್ಲದ ಜನರಿಗೆ ಒಪ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ಮನುಷ್ಯಪುತ್ರನಾದ ನನ್ನನ್ನು ಮುಖ್ಯಯಾಜಕರ ಮತ್ತು ನಿಯಮ ಬೋಧಕರ ಕೈಗೆ ಒಪ್ಪಿಸಿಕೊಡುವರು. ಅವರು ನನಗೆ ಮರಣದಂಡನೆಯನ್ನು ವಿಧಿಸಿ ನನ್ನನ್ನು ಯೆಹೂದ್ಯರಲ್ಲದವರಿಗೆ ಒಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 “ಆಯ್ಕಾ, ಅಮಿ ಅತ್ತಾ ಜೆರುಜಲೆಮಾಕ್ ಜಾವ್ಕ್ ಲಾಗ್ಲಾಂವ್, ಥೈ ಮಾನ್ಸಾಚ್ಯಾ ಲೆಕಾಕ್ ಮಹಾಯಾಜಕಾಂಚ್ಯಾ ಅನಿ ಶಾಸ್ತರಾ ಸಾಂಗ್ತಲ್ಯಾಂಚ್ಯಾ ಹಾತಿತ್ ಧರುನ್ ದಿತ್ಯಾತ್. ಮಾನಾ ತೆಚೆ ವರ್‍ತಿ ಅಪ್ವಾದ್ ಘಾಲುನ್ ತೆಕಾ ಮರ್‍ನಾಚಿ ಶಿಕ್ಷಾ ದಿವ್ನ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಾತ್ ದಿತ್ಯಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:33
23 ತಿಳಿವುಗಳ ಹೋಲಿಕೆ  

ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.


ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.


ನಿಮಗೆ ಹೇಗೆ ತೋರುತ್ತದೆ?” ಅನ್ನಲು, “ಇವನು ಮರಣದಂಡನೆಗೆ ಯೋಗ್ಯನು” ಎಂದು ಅವರು ಉತ್ತರಕೊಟ್ಟರು.


ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.


ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.


ಇಗೋ, ನಾನು ಈಗ ಪವಿತ್ರಾತ್ಮನ ನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು.


ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.


ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು.


ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.


ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗುತ್ತಿದ್ದರು.


ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.


ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.


ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು.


ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?


ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು