Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಇವರು ಆತನನ್ನು ಪರಿಹಾಸ್ಯಮಾಡುವರು; ಆತನ ಮೇಲೆ ಉಗುಳುವರು; ಕೊರಡೆಗಳಿಂದ ಹೊಡೆಯುವರು; ಅನಂತರ ಕೊಂದುಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊಂದುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಇವರು ಅವನನ್ನು ಅಪಹಾಸ್ಯಮಾಡುವರು, ಅವನ ಮೇಲೆ ಉಗುಳುವರು, ಅವನನ್ನು ಕೊರಡೆಗಳಿಂದ ಹೊಡೆಯುವರು, ಕೊಂದುಹಾಕುವರು. ಅವನು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆ ಜನರು ಆತನನ್ನು ನೋಡಿ ಅಪಹಾಸ್ಯ ಮಾಡುತ್ತಾರೆ, ಆತನ ಮೇಲೆ ಉಗುಳುತ್ತಾರೆ, ಆತನನ್ನು ಬಾರುಕೋಲಿನಿಂದ ಹೊಡೆಯುತ್ತಾರೆ ಮತ್ತು ಕೊಲ್ಲುತ್ತಾರೆ. ಆದರೆ ಆತನು ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುತ್ತಾನೆ” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಇವರು ನನ್ನನ್ನು ಹಾಸ್ಯಮಾಡಿ, ನನ್ನ ಮೇಲೆ ಉಗುಳಿ, ಕೊರಡೆಯಿಂದ ಹೊಡೆದು ನನ್ನನ್ನು ಕೊಂದುಹಾಕುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತಿ ಲೊಕಾ, ತೆಕಾ ಎಡ್ಸಡ್ತ್ಯಾತ್, ತೆಕಾ ಥುಕ್ತ್ಯಾತ್, ತೆಕಾ ಬಾರ್‍ಕೊಲಾನಿ ಮಾರ್‍ತ್ಯಾತ್. ಅನಿ ತೆಕಾ ಜಿವಾನಿಚ್ ಮಾರ್‍ತ್ಯಾತ್. ಖರೆ ತಿನ್ವ್ಯಾ ದಿಸಿ ತೊ ಝಿತ್ತೊ ಹೊವ್ನ್ ಉಟುನ್ ಯೆತಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:34
24 ತಿಳಿವುಗಳ ಹೋಲಿಕೆ  

ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.


ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,


ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.


ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.


“ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.


ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.


ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.


ಇದನ್ನು ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇನ್ನೂ ನಮಗೆ ಸಾಕ್ಷಿಗಳ ಅಗತ್ಯವೇನಿದೆ?


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ.


ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.


ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು.


ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ.


ನನಗೆ ಅಸಹ್ಯಪಟ್ಟು ದೂರ ನಿಂತು, ನನ್ನ ಮೇಲೆ ಉಗುಳುವುದಕ್ಕೂ ಹಿಂದೆಗೆಯರು.


“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;


ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು