Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಆಗ ಯೇಸು, “ನಾನು ಕುಡಿಯುವ ಪಾತ್ರೆಯಿಂದ ನೀವೂ ಕುಡಿಯುವಿರಿ; ನಾನು ಪಡೆಯಲಿರುವ ಸ್ನಾನವನ್ನು ನೀವೂ ಪಡೆಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆಗ ಯೇಸು ಅವರಿಗೆ - ನಾನು ಕುಡಿಯುವ ಪಾತ್ರೆಯಲ್ಲಿ ಕುಡಿಯುವಿರಿ; ನನಗಾಗುವ ಸ್ನಾನವು ನಿಮಗಾಗುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಿಸಿದರು. ಯೇಸು ಅವರಿಗೆ, “ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅದಕ್ಕೆ ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು. ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಿಂದ ನೀವು ಕುಡಿಯುವಿರಿ. ನಾನು ಹೊಂದುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತೆನಿ “ಹೊಯ್ ಹೆ ಅಮಿ ಕರುಕ್ ಹೊತಾ” ಮನುನ್ ಜಬಾಬ್ ದಿಲ್ಯಾನಿ. ತನ್ನಾ ಜೆಜುನ್ ತೆಂಕಾ “ಮಿಯಾ ಫಿತಲ್ಯಾ ಆಯ್ದಾನಾತ್ಲೆ ತುಮಿ ಫಿತ್ಯಾಶಿ ಅನಿ ಮಿಯಾ ಘೆತಲೆ ಬಾಲ್ತಿಮ್ ತುಮಿ ಘೆತ್ಯಾಶಿ ತೆ ಖರೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:39
10 ತಿಳಿವುಗಳ ಹೋಲಿಕೆ  

ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಹಿಂಸೆಯಲ್ಲಿ, ರಾಜ್ಯದಲ್ಲಿ, ತಾಳ್ಮೆಯಲ್ಲಿ, ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರ ಯೇಸುವಿನ ವಿಷಯವಾಗಿ ಸಾಕ್ಷಿ ನೀಡಲು ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.


ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.


ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.


ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.


ದಣಿಗಿಂತ ಆಳು ದೊಡ್ಡವನಲ್ಲವೆಂಬುದಾಗಿ ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕ ಮಾಡಿಕೊಳ್ಳಿರಿ. ಅವರು ನನ್ನನ್ನು ಹಿಂಸೆಪಡಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಕೈಗೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಗೊಳ್ಳುತ್ತಿದ್ದರು.


ಪೇತ್ರನು ಆತನಿಗೆ, “ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು” ಎಂದು ಹೇಳಿದನು.


“ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.


ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.


ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?


ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು