ಮಾರ್ಕ 10:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಅವನು ಒಬ್ಬ ಕುರುಡ ಭಿಕ್ಷುಕನಾಗಿದ್ದನು. ಈ ಮಾರ್ಗವಾಗಿ ಹೋಗುತ್ತಿರುವವನು ನಜರೇತಿನ ಯೇಸುವೆಂದು ಅವನು ಕೇಳಿದಾಗ ಅವನು, “ಯೇಸುವೇ, ದಾವೀದನ ಕುಮಾರನೇ, ನನ್ನನ್ನು ಕರುಣಿಸು” ಎಂದು ಕೂಗಿಕೊಳ್ಳುವುದಕ್ಕೆ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಕುರುಡು ಭಿಕ್ಷುಗಾರನಾದ, ತಿಮಾಯನ ಮಗ ಬಾರ್‍ತಿಮಾಯನು ದಾರಿಯ ಮಗ್ಗುಲಲ್ಲಿ ಕುಳಿತಿದ್ದನು. ಆ ಮಾರ್ಗವಾಗಿ ಹೋಗುತ್ತಿರುವಾತನು ನಜರೇತಿನ ಯೇಸು ಎಂದು ಕೇಳಿದೊಡನೆಯೇ, ಅವನು, “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಗಟ್ಟಿಯಾಗಿ ಕೂಗಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಅವನು ಕುರುಡ ಭಿಕ್ಷಗಾರನು. ಈ ಮಾರ್ಗವಾಗಿ ಹೋಗುವವನು ನಜರೇತಿನ ಯೇಸುವೆಂದು ಅವನು ಕೇಳಿ - ದಾವೀದನ ಕುಮಾರನೇ, ಯೇಸುವೇ, ನನ್ನನ್ನು ಕರುಣಿಸು ಎಂದು ಕೂಗಿಕೊಳ್ಳುವದಕ್ಕೆ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ನಜರೇತಿನ ಯೇಸು ಆ ಮಾರ್ಗವಾಗಿ ಹೋಗುತ್ತಿದ್ದಾನೆಂದು ಅವನು ಕೇಳಿ, “ಯೇಸುವೇ, ದಾವೀದನ ಕುಮಾರನೇ, ದಯವಿಟ್ಟು ನನ್ನನ್ನು ಕರುಣಿಸು!” ಎಂದು ಗಟ್ಟಿಯಾಗಿ ಕೂಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ನಜರೇತಿನ ಯೇಸು ಬರುತ್ತಿದ್ದಾರೆ ಎಂದು ಅವನು ಕೇಳಿದಾಗ, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸು,” ಎಂದು ಕೂಗಿಕೊಳ್ಳಲಾರಂಭಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ನಜರೆತಾಚೊ ಜೆಜು ಥೈತ್ನಾ ಜಾವ್ಕ್ ಲಾಗ್ಲಾ ಮನುನ್ ಆಯ್ಕುನ್, “ಜೆಜು! ದಾವಿದಾಚ್ಯಾ ಲೆಕಾ! ಮಾಜಿ ದಯಾ ಕರ್!” ಮನುನ್ ಜೊರಾನ್ ಬೊಬ್ ಮಾರುಕ್ ಲಾಗ್ಲೊ. ಅಧ್ಯಾಯವನ್ನು ನೋಡಿ |