Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಆಗ ಯೇಸು ನಿಂತು, “ಅವನನ್ನು ಕರೆಯಿರಿ” ಅನ್ನಲು ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಾನೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಇದನ್ನು ಕೇಳಿ ಯೇಸು ಅಲ್ಲೇ ನಿಂತು, “ಅವನನ್ನು ಕರೆದುಕೊಂಡು ಬನ್ನಿ,” ಎಂದು ಅಪ್ಪಣೆಮಾಡಿದರು. ಅವರು ಹೋಗಿ, “ಏಳು, ಭಯಪಡಬೇಡ, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಆಗ ಯೇಸು ನಿಂತು - ಅವನನ್ನು ಕರೆಯಿರಿ ಅನ್ನಲು ಅವರು ಆ ಕುರುಡನನ್ನು ಕರೆದು - ಧೈರ್ಯವಿರಲಿ, ಏಳು, ನಿನ್ನನ್ನು ಕರೆಯುತ್ತಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಯೇಸು ನಿಂತುಕೊಂಡು, “ಅವನನ್ನು ಕರೆಯಿರಿ” ಎಂದು ಹೇಳಿದನು. ಆದ್ದರಿಂದ ಅವರು ಆ ಕುರುಡನನ್ನು ಕರೆದು, “ಸಂತೋಷಪಡು! ಎದ್ದುನಿಲ್ಲು! ಯೇಸು ನಿನ್ನನ್ನು ಕರೆಯುತ್ತಿದ್ದಾನೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಯೇಸು ನಿಂತು, ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು, ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಅವನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಜೆಜು ಇಬೆ ರ್‍ಹಾಲೊ ಅನಿ “ತೆಕಾ ಹಿತ್ತೆ ಬಲ್ವಾ” ಮಟ್ಲ್ಯಾನ್. ತೆಚೆ ಸಾಟ್ನಿ ತೆನಿ ತ್ಯಾ ಮಾನ್ಸಾಕ್ “ಕುಶಿ ಹೊ” “ಉಟ್, ತೊ ತುಕಾ ಬಲ್ವುಲಾ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:49
9 ತಿಳಿವುಗಳ ಹೋಲಿಕೆ  

ಆಗ ಯೇಸು ನಿಂತು, ಅವನನ್ನು ತನ್ನ ಬಳಿಗೆ ಕರೆತರುವುದಕ್ಕೆ ಅಪ್ಪಣೆಕೊಟ್ಟನು. ಅವನು ಹತ್ತಿರಕ್ಕೆ ಬಂದಾಗ,


ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು.


ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.


ಯೆಹೋವನು ದಯೆಯು, ಕನಿಕರವು ಉಳ್ಳವನು, ದೀರ್ಘಶಾಂತನು, ಪ್ರೀತಿಪೂರ್ಣನು ಆಗಿದ್ದಾನೆ.


ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.


ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, “ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.


ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು