Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 11:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬೆಳಿಗ್ಗೆ ಅವರೆಲ್ಲರೂ ಅದೇ ಮಾರ್ಗವಾಗಿ ಹಿಂದಿರುಗುವಾಗ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬೆಳಿಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬುಡದಿಂದಲೂ ಒಣಗಿ ಹೋಗಿರುವದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರೊಂದಿಗೆ ಹೋಗುತ್ತಿದ್ದನು. ಹಿಂದಿನ ದಿನ ಯೇಸು ಶಪಿಸಿದ ಅಂಜೂರದ ಮರವನ್ನು ಶಿಷ್ಯರು ನೋಡಿದರು. ಅಂಜೂರದ ಮರವು ಬೇರುಸಹಿತ ಒಣಗಿಹೋಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಬೆಳಿಗ್ಗೆ ಅವರು ಅದೇ ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರ ಮರವು ಬೇರುಸಹಿತವಾಗಿ ಒಣಗಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸಕ್ಕಾಳ್ಚೆ ತೆನಿ ವಾಟೆನ್ ಜಾತಾನಾ ಅದ್ಲ್ಯಾ ದಿಸಿ ಜೆಜುನ್ ಸರಾಪ್ ದಿಲ್ಲ್ಯಾ ಅಂಜುರಾಚ್ಯಾ ಝಾಡಾಕ್ ಬಗಟ್ಲ್ಯಾನಿ ತೆ ಝಾಡ್ ಬೆರಾ ಸಮೆತ್ ವಾಳುನ್ ಗೆಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 11:20
14 ತಿಳಿವುಗಳ ಹೋಲಿಕೆ  

ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.


ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.


ಆಗ ಯೇಸು ಆ ಮರಕ್ಕೆ, “ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ” ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು.


ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.


ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ಅಯೋಗ್ಯವಾದದ್ದಾಗಿ ಶಾಪಕ್ಕೆ ಗುರಿಯಾಗುತ್ತದೆ. ಕೊನೆಗದು ಸುಡಲ್ಪಡುತ್ತದೆ.


ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?


ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು.


ಮರುದಿನ ಅವರು ಬೇಥಾನ್ಯವನ್ನು ಬಿಟ್ಟು ಬರುತ್ತಿರುವಾಗ ಆತನಿಗೆ ಹಸಿವಾಯಿತು.


(ಕಲ್ಲು) ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು, ಕಲ್ಲುಬಿರುಕಿನಲ್ಲಿಯೂ ನುಗ್ಗಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು