Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10-11 ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು; ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?" ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10-11 ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು; ನಮಗೆ ಆಶ್ಚರ್ಯವಾಗಿ ತೋರುತ್ತದೆ ಎಂಬುವ ಶಾಸ್ತ್ರವಚನವನ್ನು ನೀವು ಓದಿಲ್ಲವೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪವಿತ್ರಗ್ರಂಥದಲ್ಲಿ ಬರೆದಿರುವಂತೆ, ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈ ಪವಿತ್ರ ವಾಕ್ಯವನ್ನು ನೀವು ಓದಲಿಲ್ಲವೋ: “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತುಮಿ ಪವಿತ್ರ್ ಪುಸ್ತಕಾತ್, “ಘರ್ ಭಾಂದ್ತಲ್ಯಾನಿ ನಕ್ಕೊ ಮನುನ್ ಟಾಕಲ್ಲೊ ಗುಂಡೊಚ್ ಮಹತ್ವಾಚೊ ಗುಂಡೊ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:10
17 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’


ಆದುದರಿಂದ ಕರ್ತನಾದ ಯೆಹೋವನು ಹೀಗೆ ಹೇಳುತ್ತಾನೆ, “ಇಗೋ, ಪರೀಕ್ಷೆಗೆ ಒಳಗಾಗಿ, ಮಾನ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ, ಸ್ಥಿರವಾದ ಆಸ್ತಿವಾರವನ್ನಾಗಿ ಇಡುತ್ತೇನೆ; ಭರವಸವಿಡುವವನು ಆತುರಪಡನು.


ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು. ಧರ್ಮಶಾಸ್ತ್ರದಲ್ಲಿ ಹೀಗೆ ಬರೆಯಲ್ಪಟ್ಟಿದೆ, “ಇಗೋ ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನಲ್ಲಿ ನಂಬಿಕೆಯಿಡುವವನು ಆಶಾಭಂಗಪಡುವುದಿಲ್ಲ” ಎಂಬುದೇ.


ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ?


ಆತನಿಗೆ, “ಇವರು ಹೇಳುವುದನ್ನು ಕೇಳುತ್ತಿರುವೆಯಾ” ಎಂದು ಹೇಳಲು ಯೇಸು, “ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?” ಎಂದು ಕೇಳಿದನು.


ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,


ಯೇಸು ಅವರಿಗೆ, “ದಾವೀದನು ಮತ್ತು ಆತನ ಸಂಗಡ ಇದ್ದವರೂ ಹಸಿದಿದ್ದಾಗ, ಆತನು ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?


“ಇದಲ್ಲದೆ ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.


ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,


ಆತನು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಓದಲಿಲ್ಲವೋ?


ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’


ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು