Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೇಸು, “ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ” ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಗ ಯೇಸು, “ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದರು. ಇದನ್ನು ಕೇಳಿದ್ದೇ ಆ ಜನರು ಯೇಸುವಿನ ಬಗ್ಗೆ ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೇಸು - ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ ಎಂದು ಹೇಳಿದನು. ಅವರು ಆತನ ವಿಷಯದಲ್ಲಿ ಬಹು ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿ. ದೇವರದನ್ನು ದೇವರಿಗೆ ಕೊಡಿ” ಎಂದು ಹೇಳಿದನು. ಯೇಸು ಹೇಳಿದ್ದನ್ನು ಕೇಳಿ ಅವರು ಅತ್ಯಾಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ಯೇಸು ಉತ್ತರವಾಗಿ ಅವರಿಗೆ, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಹೇಳಿದರು. ಇದಕ್ಕೆ ಅವರು ಯೇಸುವಿನ ವಿಷಯವಾಗಿ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತನ್ನಾ ಜೆಜುನ್ ತೆಂಕಾ “ಚಕ್ರವರ್ತಿಚೆ ಚಕ್ರವರ್ತಿಕ್ ದಿವಾ ಅನಿ ದೆವಾಚೆ ದೆವಾಕ್ ದಿವಾ” ಮಟ್ಲ್ಯಾನ್. ತೆನಿ ಜೆಜುಚಿ ಗೊಸ್ಟ್ ಆಯ್ಕುನ್ ಅಜಾಪ್ ಹೊಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:17
22 ತಿಳಿವುಗಳ ಹೋಲಿಕೆ  

ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.


ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.


ಇದು ಮಾತ್ರವಲ್ಲದೆ ನೀವು ನಿಮ್ಮ ದೇಹದ ಅಂಗಗಳನ್ನು ಪಾಪಕ್ಕೆ ಒಪ್ಪಿಸುವವರಾಗಿದ್ದು, ಅವುಗಳನ್ನು ದುಷ್ಟತ್ವವನ್ನು ನಡಿಸುವ ಸಾಧನಗಳಾಗಿ ಮಾಡಬೇಡಿರಿ; ನೀವು ಸತ್ತವರೊಳಗಿಂದ ಜೀವಿತರಾಗಿರಲಾಗಿ ನಿಮ್ಮನ್ನು ದೇವರಿಗೆ ಒಪ್ಪಿಸಿಕೊಟ್ಟು, ನಿಮ್ಮ ದೇಹದ ಅಂಗಗಳನ್ನು ನೀತಿಯ ಆಯುಧಗಳನ್ನಾಗಿ ಆತನಿಗೆ ಸಮರ್ಪಿಸಿರಿ.


ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.


ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.


ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.


“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.


ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ.


ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು.


ಕಂದಾ, ನಿನ್ನ ಹೃದಯವನ್ನು ನನಗೆ ಕೊಡು, ನಿನ್ನ ಕಣ್ಣುಗಳು ನನ್ನ ಮಾರ್ಗಗಳಲ್ಲಿ ಆನಂದಿಸಲಿ.


ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.


ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು.


ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು