Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ಅವರು ಆ ಸೇವಕನನ್ನು ಹಿಡಿದು, ಹೊಡೆದು, ಬರಿಗೈಯಲ್ಲಿ ಹಿಂದಕ್ಕೆ ಅಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಅವನನ್ನು ಹಿಡುಕೊಂಡು ಹೊಡೆದು ಬರಿಗೈಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ರೈತರು ಆ ಸೇವಕನನ್ನು ಹಿಡಿದುಕೊಂಡು ಹೊಡೆದು ಏನನ್ನೂ ಕೊಡದೆ ಅವನನ್ನು ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಅವರು ಅವನನ್ನು ಹಿಡಿದು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ತ್ಯಾ ರೈತಾನಿ ತ್ಯಾ ಸೆವಕಾಕ್ ದರುನ್ ಬರೆ ಮಾರ್ ಘಾಟ್ಲ್ಯಾನಿ ಅನಿ ಖಾಲಿ ಹಾತಿನಿ ಫಾಟಿ ಧಾಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:3
29 ತಿಳಿವುಗಳ ಹೋಲಿಕೆ  

ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.


ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.


“ಯೆಹೋವನು ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ಯಾಜಕನನ್ನಾಗಿ ನೇಮಿಸಿ, ಯಾರು ತನ್ನನ್ನು ತಾನೇ ಪ್ರವಾದಿಯಂತೆ ನಟಿಸುತ್ತಾನೋ ಅವನನ್ನು ಕೋಳಕ್ಕೆ ಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ತನ್ನ ಆಲಯದಲ್ಲಿ ನಿನಗೆ ವಹಿಸಿದ್ದಾನಲ್ಲಾ.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


“ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ.


ಅವನು ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ, ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.


ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.


ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.


ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.


ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.


ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು.


ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು