Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 12:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ” ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, “ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ,” ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು - ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅವನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿದ ಯೇಸು, “ನೀನು ದೇವರ ರಾಜ್ಯಕ್ಕೆ ಹತ್ತಿರವಾಗಿರುವೆ” ಎಂದನು. ಅಂದಿನಿಂದ, ಯೇಸುವಿಗೆ ಹೆಚ್ಚು ಪ್ರಶೆಗಳನ್ನು ಕೇಳಲು ಯಾರಿಗೂ ಸಾಕಷ್ಟು ಧೈರ್ಯ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅವನು ವಿವೇಕದಿಂದ ಉತ್ತರ ಕೊಟ್ಟದ್ದನ್ನು ಯೇಸು ಕಂಡು ಅವನಿಗೆ, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ,” ಎಂದರು. ಅಂದಿನಿಂದ ಯೇಸುವನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತೆನಿ ಎವ್ಡ್ಯಾ ಬರ್‍ಯಾ ಬುದ್ವಂತ್ಕಿನ್ ಉತ್ತರ್ ದಿಲ್ಲೆ ಆಯ್ಕುನ್ ಜೆಜುನ್ ತೆಕಾ “ತಿಯಾ ದೆವಾಚ್ಯಾ ರಾಜಾಕ್ನಾ ಲೈ ಧುರ್ ನಾಸ್” ಮಟ್ಲ್ಯಾನ್. ಮಾನಾ ಕೊನಾಕ್ಬಿ ಜೆಜುಕ್ ಸವಾಲ್ ಕರುಕ್ ಧಯ್ರೊ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 12:34
10 ತಿಳಿವುಗಳ ಹೋಲಿಕೆ  

ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.


ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.


ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.


ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.


ನ್ಯಾಯಕ್ಕೆ ಜಯ ದೊರೆಯುವವರೆಗೂ ಜಜ್ಜಿದ ದಂಟನ್ನು ಮುರಿದುಹಾಕದೆಯೂ ಆರಿಹೋಗುತ್ತಿರುವ ದೀಪವನ್ನು ನಂದಿಸದೆಯೂ ಇರುವನು.


ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು